ಶಿರಸಿ:ನಗರದ ಪ್ರತಿಷ್ಟಿತ ಶಿಕ್ಷಣ ಸಂಸ್ಥೆಗಳಲ್ಲೊಂದಾದ ಲಯನ್ಸ್ ಪ್ರೌಢ ಶಾಲೆಯು ಭಾರತ ಸರ್ಕಾರದ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ನಡೆಸಿದ 2021-22 ಸಾಲಿನ ಸ್ವಚ್ಛ ವಿದ್ಯಾಲಯ ಪುರಸ್ಕಾರದ ಸರ್ವೆಯಲ್ಲಿಉತ್ತರಕನ್ನಡ ಜಿಲ್ಲಾ ಮಟ್ಟದಲ್ಲಿ 91% ಅಂಕಗಳೊಂದಿಗೆ ಐದು ಸ್ಟಾರ್ ಜೊತೆಗೆ ಸ್ವಚ್ಛ ವಿದ್ಯಾಲಯ ಪುರಸ್ಕಾರವನ್ನು ತನ್ನದಾಗಿಸಿಕೊಂಡಿದೆ.
ಕಾರವಾರದ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಜೂ.29 ರಂದು ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗಿದೆ.ಶಾಲೆಯ ಈ ಸಾಧನೆಗೆ ಆಡಳಿತ ಮಂಡಳಿ, ಶಿಕ್ಷಕ -ಶಿಕ್ಷಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಹರ್ಷ ವ್ಯಕ್ತಪಡಿಸಿದ್ದಾರೆ.