
ಕುಮಟಾ: ತಾಲೂಕಿನ ಕೂಜಳ್ಳಿಯ ರೈತ ಸಂಪರ್ಕ ಕೇಂದ್ರದ ನೂತನ ಕಟ್ಟಡ ಉದ್ಘಾಟನೆ ಹಾಗೂ ಸಮಗ್ರ ಕೃಷಿ ಅಭಿಯಾನ ಘಟಕಕ್ಕೆ ಚಾಲನೆ ನೀಡುವ ಕಾರ್ಯಕ್ರಮವು ಜು.31 ರಂದು ಶನಿವಾರ ಮಧ್ಯಾಹ್ನ 1 ಗಂಟೆಗೆ ನಡೆಯಲಿದೆ.
ರೈತ ಸಂಪರ್ಕ ಕೇಂದ್ರದ ನೂತನ ಕಟ್ಟಡದ ಉದ್ಘಾಟನೆಯನ್ನು ಶಾಸಕ ದಿನಕರ ಶೆಟ್ಟಿ ನೆರವೇರಿಸಲಿದ್ದಾರೆ. ಅಲ್ಲದೇ, ಕಾರ್ಯಕ್ರಮದಲ್ಲಿ 2021-22 ನೇ ಸಾಲಿನ ಸಮಗ್ರ ಕೃಷಿ ಅಭಿಯಾನದ ಮಾಹಿತಿ ಘಟಕಕ್ಕೆ ಚಾಲನೆ ನಡೆಯಲಿದ್ದು, ಕೃಷಿಕರು, ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಸಹಾಯಕ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.