ಕುಮಟಾ: ಕೆನರಾ ಬ್ಯಾಂಕ್ ಗ್ರಾಮೀಣ ಸ್ವ- ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಇಲೆಕ್ಟ್ರಿಕಲ್ ಮೋಟರ್ ರಿವೈಂಡಿಂಗ್ ತರಬೇತಿಯು (ಗೃಹೋಪಯೋಗಿ ವಿದ್ಯುತ್ ಉಪಕರಣಗಳಾದ ಫ್ಯಾನ್, ಮಿಕ್ಸರ್, ಸಿಂಗಲ್ ಫೇಸ್ ಪಂಪ್‌ಸೆಟ್ ಇತ್ಯಾದಿ) ಜು.04ರಿಂದ ಆ.02ರವರೆಗೆ ನಡೆಯಲಿದೆ.
ತರಬೇತಿಯು ಊಟ ಮತ್ತು ವಸತಿ ಸಹಿತ ಉಚಿತವಾಗಿರುತ್ತದೆ. ಅಭ್ಯರ್ಥಿಯು ನಿರುದ್ಯೋಗಿಯಾಗಿದ್ದು, ಸ್ವ- ಉದ್ಯೋಗದಲ್ಲಿ ಆಸಕ್ತಿ ಹೊಂದಿರಬೇಕು. ವಯೋಮಿತಿ 18ರಿಂದ 45ವರ್ಷಗಳು. ಕನಿಷ್ಟ ವಿದ್ಯಾರ್ಹತೆ ಕನ್ನಡ ಓದಲು, ಬರೆಯಲು ಬರಬೇಕು ಮತ್ತು ತರಬೇತಿಗೆ ಅನುಗುಣವಾಗಿ ಕನಿಷ್ಠ ಜ್ಞಾನವಿರಬೇಕು.
ಆಸಕ್ತರು ನೇರವಾಗಿ ನಿರ್ದೇಶಕರು, ಕೆನರಾ ಬ್ಯಾಂಕ್ ಗ್ರಾಮೀಣ ಸ್ವ- ಉದ್ಯೋಗ ತರಬೇತಿ ಸಂಸ್ಥೆ, ಕೈಗಾರಿಕಾ ವಸಾಹತು ಪ್ರದೇಶ, ಹೆಗಡೆ ರಸ್ತೆ, ಕುಮಟಾ- 581 343ಕ್ಕೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅಲ್ಲದೇ ದೂರವಾಣಿ ಸಂಖ್ಯೆ 94498 60007, 95382 81989, 99167 83825, 88804 44612, 96209 62004ಕ್ಕೆ ಸಂಪರ್ಕಿಸಿ ಹೆಚ್ಚಿನ ಮಾಹಿತಿ ಪಡೆಯಬಹುದಾಗಿದೆ.
ಗ್ರಾಮೀಣ ಭಾಗದ ಬಿಪಿಎಲ್ ಅಭ್ಯರ್ಥಿಗೆ ಮೊದಲ ಆದ್ಯತೆ ನೀಡಲಾಗುವುದು. ಆಸಕ್ತರು ತರಬೇತಿಗೆ ಬರುವಾಗ 4 ಪಾಸ್ ಪೋರ್ಟ ಸೈಜ್ ಫೋಟೋ, ರೇಶನ ಕಾರ್ಡ, ಆಧಾರ ಕಾರ್ಡ, ಬ್ಯಾಂಕ್ ಪಾಸ್‌ಬುಕ್, ಇವುಗಳ 1 ಝೆರಾಕ್ಸ್ ಪ್ರತಿಯನ್ನು ತರಬೇಕು. ಈ ತರಬೇತಿಯ ಸದುಪಯೋಗವನ್ನು ಪಡೆದುಕೊಂಡು ಉದ್ಯೋಗ ಕೈಗೊಳ್ಳಬೇಕೆಂದು ಕೋರಲಾಗಿದೆ.