ನವದೆಹಲಿ: ಏಕ ಬಳಕೆಯ ಪ್ಲಾಸ್ಟಿಕ್ ವಸ್ತುಗಳ ಬಳಕೆ, ತಯಾರಿಕೆ, ಆಮದು, ದಾಸ್ತಾನು, ವಿತರಣೆ, ಮಾರಾಟ ನಿಷೇಧ ಇಂದಿನಿಂದ ದೇಶಾದ್ಯಂತ ಜಾರಿಗೆ ಬಂದಿದೆ.
ಏಕ ಬಳಕೆಯ ಪ್ಲಾಸ್ಟಿಕ್ ಎಂದರೆ ಒಮ್ಮೆ ಮಾತ್ರ ಬಳಸಿ ಬಿಸಾಡುವ ಪ್ಲಾಸ್ಟಿಕ್ ವಸ್ತು. ನಿಷೇಧಿತ ವಸ್ತುಗಳಲ್ಲಿ ಪ್ಲಾಸ್ಟಿಕ್ ಕಡ್ಡಿಗಳು, ಪ್ಲಾಸ್ಟಿಕ್ ಧ್ವಜಗಳು, ಕ್ಯಾಂಡಿ ಸ್ಟಿಕ್‌ಗಳು, ಐಸ್ ಕ್ರೀಮ್ ಸ್ಟಿಕ್‌ಗಳು, ಅಲಂಕಾರಕ್ಕಾಗಿನ ಪಾಲಿಸ್ಟೈರೀನ್ (ಥರ್ಮಾಕೋಲ್), ಪ್ಲಾಸ್ಟಿಕ್ ಪ್ಲೇಟ್‌ಗಳು, ಪ್ಲಾಸ್ಟಿಕ್ ಕಪ್‌ಗಳು, ಪ್ಲಾಸ್ಟಿಕ್ ಗ್ಲಾಸ್‌ಗಳು ಮತ್ತು ಪ್ಲಾಸ್ಟಿಕ್ ಕಟ್ಲರಿಗಳು ಸೇರಿವೆ.
ನಿಷೇಧದ ಪರಿಣಾಮಕಾರಿ ಜಾರಿಗಾಗಿ ನಿಷೇಧಿತ ವಸ್ತುವಿನ ಅಕ್ರಮ ತಯಾರಿಕೆ, ಆಮದು, ದಾಸ್ತಾನು, ವಿತರಣೆ, ಮಾರಾಟ ಮತ್ತು ಬಳಕೆಯನ್ನು ಪರಿಶೀಲಿಸಲು ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ನಿಯಂತ್ರಣ ಕೊಠಡಿಗಳನ್ನು ಸ್ಥಾಪಿಸಲಾಗುವುದು ಎಂದು ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ತಿಳಿಸಿದೆ.
ಮಾನವ ಆರೋಗ್ಯ ಮತ್ತು ಪರಿಸರದ ಮೇಲೆ ಏಕ ಬಳಕೆ ಪ್ಲಾಸ್ಟಿಕ್ ಗಂಭೀರ ಪರಿಣಾಮ ಬೀರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಪ್ಲಾಸ್ಟಿಕ್ ನಿಷೇಧಕ್ಕೊಳಪಡಿಸುತ್ತಿದೆ.
ಕೃಪೆ-https://news13.in/