Slide
Slide
Slide
previous arrow
next arrow

ಸಂಪೂರ್ಣ ಹದಗೆಟ್ಟ ಹಿಂಡಬೈಲ್ ರಸ್ತೆ:ದುರಸ್ತಿ ಮಾಡದಿದ್ದರೆ ಪ್ರತಿಭಟನೆ ನಿಶ್ಚಿತ

300x250 AD

ಕುಮಟಾ: ತಾಲೂಕಿನ ಸಂತೇಗುಳಿಯ ಹಿಂಡಬೈಲ್ ರಸ್ತೆ ಸಂಪೂರ್ಣ ಹೊಂಡಮಯವಾಗಿದ್ದು, ಮಳೆ ನೀರು ತುಂಬಿಕೊಂಡು ಸಂಚಾರಕ್ಕೆ ತೊಂದರೆಯಾಗಿದೆ.

ತಾಲೂಕಿನ ಸಂತೇಗುಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಹಿಂಡಬೈಲ್ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಎಲ್ಲಿ ನೋಡಿದರೂ ಹೊಂಡಗಳಿಂದಲೇ ತುಂಬಿದೆ. ಇದು ಪಿಡಬ್ಲುಡಿ ರಸ್ತೆಯಾಗಿದ್ದು, ಸಮರ್ಪಕ ನಿರ್ವಹಣೆ ಮಾಡದ ಕಾರಣ ರಸ್ತೆ ಸಂಪೂರ್ಣ ಹದಗೆಟ್ಟಿದೆ. ರಸ್ತೆಯುದ್ದಕ್ಕೂ ಬೃಹತ್ ಗಾತ್ರದ ಹೊಂಡಗಳು ನಿರ್ಮಾಣವಾಗಿದ್ದರಿಂದ ಮಳೆಗಾಲದಲ್ಲಿ ಈ ಹೊಂಡಗಳಲ್ಲಿ ನೀರು ತುಂಬಿಕೊಂಡು ರಸ್ತೆ ಯಾವುದು,ಹೊಂಡ ಯಾವುದು ಎಂಬುದು ಗೋಚರಿಸದೆ ದ್ವಿಚಕ್ರ ವಾಹನ ಸವಾರರು ಬಿದ್ದು, ಪೆಟ್ಟು ಮಾಡಿಕೊಳ್ಳುವ ದುಃಸ್ಥಿತಿ ಎದುರಾಗಿದೆ.

ಇನ್ನು ಜೋರಾಗಿ ಮಳೆ ಸುರಿದರೆ ರಸ್ತೆಯುದ್ದಕ್ಕೂ ನೀರು ತುಂಬಿಕೊಂಡು ಸಂಚಾರಕ್ಕೆ ತೀವ್ರ ತೊಂದರೆಯಾಗುತ್ತಿದೆ. ಇದೇ ರಸ್ತೆಯಲ್ಲಿ ಸರ್ಕಾರಿ ಹಿರಿಯ ಪ್ರಾಥಮ ಶಾಲೆ ಕೂಡ ಇರುವುದರಿಂದ ವಿದ್ಯಾರ್ಥಿಗಳ ಸಂಚಾರಕ್ಕೂ ಸಮಸ್ಯೆಯಾಗಿದೆ.

300x250 AD

ರಸ್ತೆ ದುರಸ್ತಿ ಮಾಡಿಕೊಡುವಂತೆ ಈಗಾಗಲೇ ಪಿಡಬ್ಲುಡಿ ಅಧಿಕಾರಿಗಳನ್ನು ಒತ್ತಾಯಿಸಿದರೂ ಪ್ರಯೋಜನವಾಗಿಲ್ಲ. ಹಾಗಾಗಿ ಸ್ಥಳೀಯ ಶಾಸಕರು, ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಗಮನ ಹರಿಸಿ, ರಸ್ತೆಯ ದುರಸ್ತಿಗೆ ಶೀಘ್ರ ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಸ್ಥಳೀಯರಾದ ಮುಜಾಫರ್ ಅಬ್ದುಲ್ ಕರೀಮ್ ಸಾಬ್, ಮಾದವ ನಾಯ್ಕ, ರೀಹಾನ್ ಸಾಬ್, ಎಂ ಡಿ ಗೌಸ್, ಆರ್ ವಿ ಭಂಡಾರಿ, ರವಿ ಎಂ ನಾಯ್ಕ, ಸಮೀಮ್ ಖಾಜಿ ಇತರರು ಎಚ್ಚರಿಸಿದ್ದಾರೆ.

Share This
300x250 AD
300x250 AD
300x250 AD
Back to top