Slide
Slide
Slide
previous arrow
next arrow

ಬೈಕ್ ಗೆ ಗುದ್ದಿದ ಕಾರು:ಬೈಕ್ ಸವಾರನಿಗೆ ಗಂಭೀರ ಗಾಯ

300x250 AD

ಅಂಕೋಲಾ: ಪಟ್ಟಣದ ಕೆ.ಎಲ್. ಇ ರಸ್ತೆಯ ನಾಡವರ ಸಭಾ ಭವನದ ಎದುರು ಬೈಕಿಗೆ ಕಾರು ಡಿಕ್ಕಿ ಹೊಡೆದು ವ್ಯಕ್ತಿಯೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ಸಂಭವಿಸಿದೆ. ಬೈಕ್ ಸವಾರ ಜಮಗೋಡ ನಿವಾಸಿ ಗೋಪಾಲ ಸುಕ್ರು ಗೌಡ (61) ಎನ್ನುವವರ ಬಲ ಕಾಲಿಗೆ ಗಂಭೀರ ಸ್ವರೂಪದ ಗಾಯಗಳಾಗಿದೆ.

ರಾಷ್ಟ್ರೀಯ ಹೆದ್ದಾರಿ 66 ರ ಪಿಕಾಕ್ ಹೊಟೇಲ್ ಕಡೆಯಿಂದ ಅಂಕೋಲಾ ಕಡೆಗೆ ಕಾರು ಚಲಾಯಿಸಿಕೊಂಡು ಬರುತ್ತಿದ್ದ ಚಾಲಕಿ ಸೂರ್ವೆ ನಿವಾಸಿ ರಾಜಲಕ್ಷ್ಮಿ ನಾರಾಯಣ ನಾಯಕ ಎನ್ನುವವರು ಅತಿವೇಗ ಮತ್ತು ಅಜಾಗರೂಕತೆಯಿಂದ ಕಾರು ಚಲಾಯಿಸಿ ರಸ್ತೆಯ ತಿರುವಿನಲ್ಲಿ ಕಾರು ನಿಯಂತ್ರಣ ಮಾಡಲು ಸಾಧ್ಯವಾಗದೇ ರಸ್ತೆ ಬಲಬದಿಗೆ ಬಂದು, ಅಂಕೋಲಾ ಕಡೆಯಿಂದ ರಾಷ್ಟ್ರೀಯ ಹೆದ್ದಾರಿ ಕಡೆ ಹೋಗುತ್ತಿದ್ದ ಬೈಕಿಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದ ಕುರಿತು ಅಂಕೋಲಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದ್ದು ಪ್ರಕರಣ ದಾಖಲಿಸಿಕೊಂಡ ಪೊಲೀಸರು ಕಾನೂನು ಕ್ರಮ ಕೈಗೊಂಡಿದ್ದಾರೆ.

300x250 AD
Share This
300x250 AD
300x250 AD
300x250 AD
Back to top