• Slide
    Slide
    Slide
    previous arrow
    next arrow
  • ಗೊಂದಲ ಬಗೆಹರಿಸಿ ವಿದ್ಯಾರ್ಥಿಗಳಿಗೆ ಪತ್ರಿಕಾ ಕ್ಷೇತ್ರದಲ್ಲಿ ಆಸಕ್ತಿ ಮೂಡಿಸಿದ ಎಂ.ಕೆ.ಹೆಗಡೆ

    300x250 AD

    ಶಿರಸಿ: ತಾಲೂಕಿನ ಹೆಗಡೆಕಟ್ಟಾದ ಶ್ರೀ ಗಜಾನನ ಸೆಕೆಂಡರಿ ಸ್ಕೂಲ್‌ನಲ್ಲಿ ಇತ್ತೀಚೆಗೆ ಪತ್ರಿಕೋದ್ಯಮ ಕುರಿತು ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ ನಡೆಯಿತು.
    ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಪತ್ರಕರ್ತರು, ಶಾಲೆಯ ಹಳೆಯ ವಿದ್ಯಾರ್ಥಿಯಾದ ಎಂ.ಕೆ.ಹೆಗಡೆ ಕಲ್ಮನೆ ಭಾಗವಹಿಸಿ ಪತ್ರಿಕೋದ್ಯಮ ಕ್ಷೇತ್ರದಲ್ಲಿರುವ ಅವಕಾಶಗಳ ಬಗ್ಗೆ ಬೆ ಹಲವು ರೀತಿಯ ಪ್ರಶ್ನೆಗಳಿಗೆ ಸಮರ್ಪಕವಾಗಿ ಉತ್ತರ ನೀಡಿದ ಅವರು ಮಕ್ಕಳ ಅನುಮಾನ ಬಗೆಹರಿಸಿ, ಪತ್ರಿಕಾ ಕ್ಷೇತ್ರದಲ್ಲಿ ವಿದ್ಯಾರ್ಥಿಗಳಿಗೆ ಆಸಕ್ತಿ ಮೂಡಲು ಕಾರಣರಾದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಸಂಸ್ಥೆಯ ಅಧ್ಯಕ್ಷ ಎಂ.ಆರ್.ಹೆಗಡೆ ಹೊನ್ನೆಕಟ್ಟಾ ವಹಿಸಿದ್ದರು. ಸಂಸ್ಥೆಯ ಸದಸ್ಯ ವಿಶ್ವನಾಥ ಹೆಗಡೆ ಶೀಗೆಹಳ್ಳಿ, ಗೋಪಾಲಕೃಷ್ಣ ಹೆಗಡೆ ಮರಿಯಜ್ಜನ್ ಉಪಸ್ಥಿತರಿದ್ದರು. ಮುಖ್ಯಾಧ್ಯಾಪಕರಾದ ಶೈಲೇಂದ್ರ ಎಂ.ಎಚ್. ಸ್ವಾಗತಿಸಿದರೆ, ಶಿಕ್ಷಕ ಕೆ.ಎನ್. ನಾಯ್ಕ ವಂದಿಸಿದರು. ಶಿಕ್ಷಕರಾದ ಆರ್. ಎನ್. ಹೆಗಡೆ ಕಾರ್ಯಕ್ರಮ ನಿರ್ವಹಿಸಿದರು.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top