• Slide
    Slide
    Slide
    previous arrow
    next arrow
  • ವಚನ ಸಾಹಿತ್ಯದ ಮಹತ್ವ ಮುಂದಿನ ಪೀಳಿಗೆಗೆ ತಿಳಿಯುವಂತಾಗಬೇಕು: ಜಯಲಕ್ಷ್ಮಿ ರಾಯಕೋಡ

    300x250 AD

    ಕಾರವಾರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತಾಶ್ರಯದಲ್ಲಿ ಜಿಲ್ಲಾಧಿಕಾರಿ ಸಭಾಭವನದಲ್ಲಿ ಆಯೋಜಿಸಲಾಗಿದ್ದ ಫಕೀರಪ್ಪ ಗುರುಬಸಪ್ಪ ಹಳಕಟ್ಟಿ ಜಯಂತಿಯನ್ನು ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಉಪವಿಭಾಗಾಧಿಕಾರಿ ಜಯಲಕ್ಷ್ಮಿ ರಾಯಕೋಡ ಮೂಲಕ ಉದ್ಘಾಟಿಸಿದರು.

    ನಂತರ ಮಾತನಾಡಿದ ಅವರು ವಚನ ಸಾಹಿತ್ಯ ಆಚರಣೆಗಷ್ಟೇ ಸೀಮಿತವಾಗಿರದೆ, ಇದರ ಸಂರಕ್ಷಣೆಯು ಅವಶ್ಯಕವಾಗಿದೆ. ಮುಂದಿನ ಪೀಳಿಗೆಗೆ ಇದರ ಮಹತ್ವ ತಿಳಿಯುವಂತಾಗಬೇಕು. ವಚನಗಳು ಪ್ರತಿಯೊಬ್ಬರ ಬದುಕಿನಲ್ಲಿ ಸಾರ್ಥಕತೆಯನ್ನು ಪಡೆದುಕೊಳ್ಳುವುದಕ್ಕೆ ಇರುವಂತಹ ಜ್ಞಾನದ ಮೂಲ ಭಂಡಾರಗಳು. ಇವುಗಳನ್ನು ಉಳಿಸಿ ಬೆಳೆಸಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಹೇಳಿದರು.

    300x250 AD

    ಕಾರ್ಯಕ್ರಮದಲ್ಲಿ ಭೂಮಾಪನ ಇಲಾಖೆ ಸಹಾಯಕ ನಿರ್ದೇಶಕ ರಾಜು ಪೂಜಾರಿ, ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿ ಹಾಗೂ ಇನ್ನಿತರರು ಇದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪನಿರ್ದೇಶಕ ನರೇಂದ್ರ ನಾಯ್ಕ ಸ್ವಾಗತಿಸಿದರು.

    Share This
    300x250 AD
    300x250 AD
    300x250 AD
    Leaderboard Ad
    Back to top