Slide
Slide
Slide
previous arrow
next arrow

ಬಿಜೆಪಿ ತಾಲೂಕು ಘಟಕದಿಂದ ಪತ್ರಕರ್ತರ ಅಭಿನಂದನೆ ಕಾರ್ಯಕ್ರಮ

300x250 AD

ಸಿದ್ದಾಪುರ: ಸಮಾಜದ ಅಂಕು- ಡೊಂಕುಗಳನ್ನು ತಿದ್ದುವ, ಸರಕಾರದ ಕಾರ್ಯವಿಧಾನವನ್ನು ವಿಶ್ಲೇಷಿಸಿ ಸರಿಪಡಿಸುವ ಮಹತ್ವದ ಕಾರ್ಯ ಮಾಧ್ಯಮಗಳಿಂದ ಆಗುತ್ತಿದೆ ಎಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಕೆ.ಜಿ.ನಾಯ್ಕ ಹಣಜೀಬೈಲ್ ಹೇಳಿದರು.

ಅವರು ಪತ್ರಿಕಾ ದಿನಾಚರಣೆ ಸಂದರ್ಭದಲ್ಲಿ ಬಿಜೆಪಿ ತಾಲೂಕು ಘಟಕ ಆಯೋಜಿಸಿದ್ದ ಪತ್ರಕರ್ತರ ಅಭಿನಂದನೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗಗಳ ಜೊತೆಗೆ ಪತ್ರಿಕಾರಂಗವೂ ಒಂದು ಮಹತ್ವದ ಅಂಗ. ನಾವು ಪತ್ರಿಕೆಗಳಿಂದ, ಮಾಧ್ಯಮಗಳಿಂದ ಹೆಚ್ಚಿನ ಪ್ರಯೋಜನ ಪಡೆಯುತ್ತೇವೆ. ಜನಪ್ರತಿನಿಧಿಗಳು ತಪ್ಪು ಮಾಡಿದಾಗ ತಿದ್ದುವ, ಜನಾಭಿಪ್ರಾಯ ರೂಪಿಸುವ ಕಾರ್ಯ ಮಾಧ್ಯಮಗಳಿಂದ ಆಗುತ್ತಿದೆ ಎಂದರು.

ಬಿಜೆಪಿ ಮಂಡಲ ಅಧ್ಯಕ್ಷ ನಾಗರಾಜ ನಾಯ್ಕ ಬೇಡ್ಕಣಿ ಮಾತನಾಡಿ, ಪ್ರಜಾಪ್ರಭುತ್ವ ಯಶಸ್ವಿಯಾಗಲು ಮಾಧ್ಯಮ ಕ್ಷೇತ್ರ ಪ್ರಮುಖ ಕಾರಣ.ಸರಕಾರ ಮತ್ತು ಜನರ ನಡುವೆ ಕೊಂಡಿಯಾಗಿ ಜನರ ಕುಂದುಕೊರತೆಗಳ ಬಗ್ಗೆ ಗಮನ ಸೆಳೆಯುವದರ ಜೊತೆಗೆ ಸಮಾಜ ಸರಿಯಾದ ದಿಕ್ಕಿನಲ್ಲಿ ಸಾಗುವಲ್ಲಿ ಮಾಧ್ಯಮ ಕ್ಷೇತ್ರದ ಕೊಡುಗೆ ಹೆಚ್ಚಿನದು. ವರದಿಗಾರರು ವಸ್ತುನಿಷ್ಠವಾಗಿ ಕಾರ್ಯನಿರ್ವಹಿಸಿದಾಗ ಜನಸಮೂಹಕ್ಕೆ ಒಳಿತಾಗುತ್ತದೆ ಎಂದರು.

300x250 AD

ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಗಂಗಾಧರ ಕೊಳಗಿ, ಜಿಲ್ಲಾ ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ಶಿವಶಂಕರ ಕೋಲಸಿರ್ಸಿ, ಪತ್ರಕರ್ತರಾದ ಕನ್ನೇಶ ಕೋಲಸಿರ್ಸಿ, ನಾಗರಾಜ ನಾಯ್ಕ ಮಾಳ್ಕೋಡ, ಸುರೇಶ ಕಡಕೇರಿ ಅನಿಸಿಕೆ ವ್ಯಕ್ತಪಡಿಸಿದರು.

ಪಟ್ಟಣ ಪಂಚಾಯತ ಉಪಾಧ್ಯಕ್ಷ ರವಿಕುಮಾರ ನಾಯ್ಕ, ಸ್ಥಾಯಿ ಸಮಿತಿ ಅಧ್ಯಕ್ಷ ವಿನಯ ಹೊನ್ನೆಗುಂಡಿ, ಸದಸ್ಯರಾದ ಸುಧೀರ ಕೊಂಡ್ಲಿ, ವಿಜಯೇಂದ್ರ ಗೌಡರ್, ವೆಂಕೋಬ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೃಷ್ಣಮೂರ್ತಿ ಕಡಕೇರಿ, ಮಂಡಲ ಪ್ರಧಾನ ಕಾರ್ಯದರ್ಶಿ ಎಸ್.ಕೆ.ಮೇಸ್ತ, ತಾಲೂಕು ಯುವಮೋರ್ಚಾ ಅಧ್ಯಕ್ಷ ಪ್ರವೀಣ ನಾಯ್ಕ, ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ವಿಕ್ಕಿ ಫರ್ನಾಂಡಿಸ್ ಸೇರಿದಂತೆ ಹಲವು ಪ್ರಮುಖರು ಇದ್ದರು

Share This
300x250 AD
300x250 AD
300x250 AD
Back to top