ಕಾರವಾರ: ಉತ್ತರ ಕನ್ನಡ ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಹವಾಮಾನ ಇಲಾಖಾ ಮುನ್ಸೂಚನೆಯನ್ನು ಗಮನದಲ್ಲಿರಿಸಿ, ಮಕ್ಕಳ ಸುರಕ್ಷತೆಯನ್ನು ಗಮನದಲ್ಲಿರಿಸಿಕೊಂಡು, ಜು.5, ಮಂಗಳವಾರದಂದು ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕಶಾಲೆ, ಪ್ರೌಢಶಾಲೆ, ಪದವಿ ಪೂರ್ವ ಹಾಗೂ ಪದವಿ ಕಾಲೇಜು ಮುಂತಾದ ಶೈಕ್ಷಣಿಕ ಸಂಸ್ಥೆಗಳಿಗೆ ಮುಂಜಾಗ್ರತಾ ಕ್ರಮವಾಗಿ ರಜೆ ಘೋಷಿಸಿ ಮಾನ್ಯ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ ಎಂದು ಜಿಲ್ಲಾಡಳಿತ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ಇಂದು ಶಾಲೆಗೆ ರಜೆ ನೀಡಿರುವ ವಿಷಯ ಘೋಷಿಸುವ ವೇಳೆಗೆ ಬಹುತೇಕ ವಿದ್ಯಾರ್ಥಿಗಳು ಶಾಲೆಗೆ ಹೊರಟಾಗಿದೆ. ಇಂತಹ ಸಮಯದಲ್ಲಿ ಮುಂಚಿತವಾಗಿ ಜಿಲ್ಲಾಡಳಿತ ನಿರ್ಧಾರ ತೆಗೆದುಕೊಳ್ಳಬೇಕು ಎಂಬುದು ಸಾರ್ವಜನಿಕರ ಅಭಿಪ್ರಾಯವಾಗಿದೆ.