
ಹುಬ್ಬಳ್ಳಿ: ಉತ್ತರ ಕನ್ನಡ ಜಿಲ್ಲೆ ಪ್ರವಾಹ ಪರಿಸ್ಥಿತಿ ಪರಿಶೀಲಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಹುಬ್ಬಳ್ಳಿಯಿಂದ ಕಾರವಾರಕ್ಕೆ ತೆರಳುವ ಸಂದರ್ಭದಲ್ಲಿ ಕಾರೊಂದು ಡಿಕ್ಕಿಯಾಗಿ ಸಣ್ಣ ಅಪಘಾತವಾಗಿದೆ.
ಮುಖ್ಯಮಂತ್ರಿಗಳ ಬೆಂಗಾವಲು ವಾಹನದ ಹಿಂದೆ ಸಾಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಕಾರು ಸಿಎಂ ಬೆಂಗಾವಲು ವಾಹನಕ್ಕೆ ಡಿಕ್ಕಿಹೊಡೆದಿದೆ. ಕಾರಿನಲ್ಲಿದ್ದ ಕೆಲವರಿಗೆ ಸಣ್ಣಪುಟ್ಟಗಾಯಗಳಾಗಿದ್ದು, ಹೆಚ್ಚಿನ ಅನಾಹುತ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.
ಆದರೆ, ಅಪಘಾತವಾಗಿದ್ದು ಶಿವರಾಮ ಹೆಬ್ಬಾರ ಕಾರು ಎಂದು ಸುದ್ದಿಯಾಗಿತ್ತು. ಶಿವರಾಮ ಹೆಬ್ಬಾರ್ ಮುಖ್ಯಮಂತ್ರಿಗಳ ಕಾರಿನಲ್ಲೇ ಇದ್ದರು ಎಂದು ಅವರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.