ಅಂಕೋಲಾ: ಪುರಸಭೆ ಸ್ಥಾಯಿ ಸಮಿತಿ ನೂತನ ಅಧ್ಯಕ್ಷರಾಗಿ ಶ್ರೀಧರ ನಾಯ್ಕ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.
ಶುಕ್ರವಾರ ಪುರಸಭೆ ಸಭಾಭವನದಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು. ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಶಾಸಕಿ ರೂಪಾಲಿ ನಾಯ್ಕ ನೂತನ ಸ್ಥಾಯಿ ಸಮಿತಿ ಅಧ್ಯಕ್ಷ ಶ್ರೀಧರ ನಾಯ್ಕರಿಗೆ ಶುಭಕೋರಿ ಮಾತನಾಡಿ, ಅಂಕೋಲಾ ನಗರ ಸುಂದರವಾಗಿ ಕಾಣಲು ಸಾಕಷ್ಟು ಅನುಧಾನ ನೀಡಲಾಗಿದೆ. ಪುರಸಭೆಯ ಪ್ರತಿಯೊಂದು ವಾರ್ಡಗಳ ಅಭಿವೃದ್ದಿಯನ್ನು ಮಾಡಲಾಗುವುದು. ಮುಂದಿನ ದಿನದಲ್ಲಿ ವಾರ್ಡ ಸಭೆಗಳನ್ನು ಏರ್ಪಡಿಸಿ ಜನರ ಅಹವಾಲನ್ನು ಪಡೆದು ಅಲ್ಲಿರುವ ಸಮಸ್ಯೆಗಳನ್ನು ಬಗೆಹರಿಸಲಾಗುವುದು ಎಂದು ಹೇಳಿದರು.
ವಿಧಾನ ಪರಿಷತ್ ಸದಸ್ಯ ಗಣಪತಿ ಉಳ್ವೇಕರ, ಪುರಸಭಾ ಅಧ್ಯಕ್ಷೆ ಶಾಂತಲಾ ನಾಡಕರ್ಣಿ, ಉಪಾಧ್ಯಕ್ಷೆ ರೇಖಾ ಗಾಂವಕರ, ಮುಖ್ಯಾಧಿಕಾರಿ ಎನ್.ಎಂ. ಮೇಸ್ತಾ, ಪುರಸಭಾ ಸದಸ್ಯರು, ಬಿಜೆಪಿ ಮಂಡಲಾಧ್ಯಕ್ಷ ಸಂಜಯ ನಾಯ್ಕ ಪ್ರಮುಖರಾದ ರಾಜೇಂದ್ರ ನಾಯ್ಕ ಸೇರಿದಂತೆ ಹಲವರು ಇದ್ದರು.