Slide
Slide
Slide
previous arrow
next arrow

ಶ್ರೀನಿಕೇತನ ಶಾಲೆಯಲ್ಲಿ ವಿದ್ಯಾಧಿದೇವತೆ ಸರಸ್ವತಿ ಹವನ

300x250 AD

ಶಿರಸಿ: ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಇದರ ಅಡಿಯಲ್ಲಿ ನಡೆಯುತ್ತಿರುವ ಇಸಳೂರಿನ ಶ್ರೀನಿಕೇತನ ಶಾಲೆಯಲ್ಲಿ ಪರಮಪೂಜ್ಯ ಶ್ರೀಮದ್ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮಿಗಳ ದಿವ್ಯ ಸಾನ್ನಿಧ್ಯದಲ್ಲಿ ಹಾಗೂ ಶ್ರೀ ಮಠದ ಪುರೋಹಿತರಾದ ವಿದ್ವಾನ್ ಕೃಷ್ಣ ಜೋಶಿ ಇವರ ನೇತೃತ್ವದಲ್ಲಿ ವಿದ್ಯಾಧಿದೇವತೆಯಾದ ಸರಸ್ವತಿ ಹವನವನ್ನು ನೆರವೇರಿಸಲಾಯಿತು.

ಇದೇ ಸಂದರ್ಭದಲ್ಲಿ ಶಾಲೆಯ 2022-23 ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಸಂಸತ್ತು ಹಾಗೂ ಇನ್ನಿತರ ಸಂಘಗಳನ್ನು ಉದ್ಘಾಟಿಸಿ ಆಶೀರ್ವಚನ ನೀಡಿ ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣಗಳನ್ನು ಬೆಳೆಸಲು ಇಂತಹ ಸಂಘಗಳು ಹಾಗೂ ಶಾಲಾ ಹಂತದಲ್ಲಿ ಸಂಸತ್ತುಗಳು ಬಹಳ ಸಹಕಾರಿಯಾಗಲಿದೆ ಎಂದರು. ಶಾಲೆಯ ದೈಹಿಕ ಶಿಕ್ಷಕರಾದ ಸಂತೋಷ ಸಾಲೇರ್‌ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಪ್ರಮಾಣ ವಚನ ಬೋಧಿಸಿದರು.ಸಹ ಶಿಕ್ಷಕರಾದ ರಜತ್ ಶೇಟಿಯಾ ಕಾರ್ಯಕ್ರಮ ನಿರ್ವಹಿಸಿದರು.ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿಯ ಸದಸ್ಯರು, ಪ್ರಾಚಾರ್ಯರು, ಶಾಲೆಯ ಎಲ್ಲ ಶಿಕ್ಷಕ ಶಿಕ್ಷಕೇತರ ಸಿಬ್ಬಂದಿಗಳು ಹಾಗೂ ಎಲ್ಲ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

300x250 AD
Share This
300x250 AD
300x250 AD
300x250 AD
Back to top