Slide
Slide
Slide
previous arrow
next arrow

ಪ್ರೇರಣೆ-2022: ಸಾಧನೆ ಮೆರೆದ ಲಯನ್ಸ ವಿದ್ಯಾರ್ಥಿಗಳು

300x250 AD

ಶಿರಸಿ; ಉತ್ತರ ಕನ್ನಡ ಜಿಲ್ಲಾ ಪಂಚಾಯತ, ಜಿಲ್ಲಾಡಳಿತ, ಕರ್ನಾಟಕ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ವಿವಿಧ ಸಂಘ-ಸಂಸ್ಥೆಗಳ ಆಶ್ರಯದಲ್ಲಿ ಕಾರವಾರದಲ್ಲಿ ಜರುಗಿದ ಪ್ರೇರಣೆ-2022 ಕ್ರೀಡಾ ಸ್ಪರ್ಧೆಗಳಲ್ಲಿ ಲಯನ್ಸ್ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಪದಕ ವಿಜೇತರಾಗಿರುತ್ತಾರೆ. ಕುಮಾರ ಅಭಿನೀತ ಭಟ್ 6 ನೇ ತರಗತಿ, ಹದಿನೆಂಟು ವರ್ಷದೊಳಗಿನವರ ಚೆಸ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಹಾಗೂ ಕುಮಾರಿ ತ್ವಿಶಾ ಹೆಗಡೆ ಹದಿನೆಂಟು ವರ್ಷದೊಳಗಿನವರ ಬ್ಯಾಡ್ಮಿಂಟನ್ ಡಬಲ್ಸ್ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ. ಸಾಧನೆ ತೋರಿದ ವಿದ್ಯಾರ್ಥಿಗಳಿಗೆ,ಅವರಿಗೆ ಮಾರ್ಗದರ್ಶನ ನೀಡಿದ ತರಬೇತುದಾರರಿಗೆ ಹಾಗೂ ವಿದ್ಯಾರ್ಥಿಗಳ ಪಾಲಕರಿಗೆ ಶಿರಸಿ ಲಯನ್ಸ್ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ, ಲಯನ್ಸ್ ಕ್ಲಬ್ ಬಳಗ, ಶಿರಸಿ ಲಯನ್ಸ್ ಶಾಲೆಯ ಮುಖ್ಯಾಧ್ಯಾಪಕರು ಹಾಗೂ ಶಿಕ್ಷಕವೃಂದ ತುಂಬು ಹೃದಯದಿಂದ ಶುಭ ಹಾರೈಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top