ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಳಿಗ್ಗೆ ಹೊಸ ಸಂಸತ್ತಿನ ಕಟ್ಟಡದ ಛಾವಣಿಯ ಮೇಲೆ 6.5 ಮೀಟರ್ ಉದ್ದದ ಕಂಚಿನ ರಾಷ್ಟ್ರೀಯ ಲಾಂಛನವನ್ನು ಅನಾವರಣಗೊಳಿಸಿದರು.
ಲಾಂಛನವು ಒಟ್ಟು 9,500 ಕೆಜಿ ತೂಕದ ಕಂಚಿನಿಂದ ಮಾಡಲ್ಪಟ್ಟಿದೆ ಮತ್ತು 6.5 ಮೀಟರ್ ಎತ್ತರವಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹೊಸ ಸಂಸತ್ತಿನ ಕಟ್ಟಡದ ಕೇಂದ್ರ ದ್ವಾರದ ಮೇಲ್ಭಾಗದಲ್ಲಿ ಇದನ್ನು ಸ್ಥಾಪಿಸಲಾಗಿದೆ ಮತ್ತು ಲಾಂಛನವನ್ನು ಬೆಂಬಲಿಸಲು ಸುಮಾರು 6,500 ಕೆಜಿ ತೂಕದ ಉಕ್ಕಿನ ಪೋಷಕ ರಚನೆಯನ್ನು ನಿರ್ಮಿಸಲಾಗಿದೆ.
ಲಾಂಛನ ಅನಾವರಣದ ಬಳಿಕ ನೂತನ ಸಂಸತ್ತಿನ ಕಾರ್ಯದಲ್ಲಿ ತೊಡಗಿರುವ ಕಾರ್ಯಕರ್ತರೊಂದಿಗೆ ಮೋದಿ ಸಂವಾದ ನಡೆಸಿದರು.
ಕೃಪೆ-https://news13.in/