Slide
Slide
Slide
previous arrow
next arrow

ಜು.13 ಕ್ಕೆ ಜಿಲ್ಲೆಗೆ ಸಿಎಂ ಬೊಮ್ಮಾಯಿ

300x250 AD

ಬೆಂಗಳೂರು: ಅತಿವೃಷ್ಟಿಯಿಂದ ಹಾನಿಗೊಳಗಾದ ಕೊಡಗು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಿಗೆ ಪ್ರವಾಸ ಕೈಗೊಳ್ಳುವುದಾಗಿ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದು ಇದೀಗ ಜುಲೈ 13 ಕ್ಕೆ ಮುಖ್ಯಮಂತ್ರಿ ಗಳು ಉತ್ತರಕನ್ನಡಕ್ಕೆ ಭೇಟಿನೀಡುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

ವೇಳಾಪಟ್ಟಿಯ ವಿವರ ಇಲ್ಲಿದೆ…

13/07/2022- ಬುಧವಾರ

ಬೆಳಿಗ್ಗೆ-09.00: ಮಳೆ ಹಾನಿಗೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಚರ್ಚೆ ಸ್ಥಳ: ಜಿಲ್ಲಾಧಿಕಾರಿಗಳ ಕಛೇರಿ, ಉಡುಪಿ

ಬೆಳಿಗ್ಗೆ:10.30: ಉಡುಪಿ, ಉಡುಪಿ ಜಿಲ್ಲೆ (ರಸ್ತೆಯ ಮೂಲಕ) ಭಟ್ಕಳ, ಉತ್ತರ ಕನ್ನಡ ಜಿಲ್ಲೆ

ಮಧ್ಯಾಹ್ನ :12.00: ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ಹಾಗೂ ವೀಕ್ಷಣೆ (ಕ್ರಮ: ಜಿಲ್ಲಾಧಿಕಾರಿಗಳು, ಕಾರವಾರ, ಉತ್ತರ ಕನ್ನಡ ಜಿಲ್ಲೆ)

ಮಳೆ ಹಾನಿಗೆ ಸಂಬಂಧಿಸಿದಂತೆ ಉತ್ತರ ಕನ್ನಡ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಚರ್ಚೆ

ಮಧ್ಯಾಹ್ನ:02.45: : ಭಟ್ಕಳ, ಉತ್ತರ ಕನ್ನಡ ಜಿಲ್ಲೆ (ರಸ್ತೆಯ ಮೂಲಕ) ಉಡುಪಿ ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ಹಾಗೂ ವೀಕ್ಷಣೆ (ಕ್ರಮ: ಜಿಲ್ಲಾಧಿಕಾರಿಗಳು, ಉಡುಪಿ, ಉಡುಪಿ ಜಿಲ್ಲೆ)

300x250 AD

ಸಂಜೆ :06.00: ಉಡುಪಿ, ಉಡುಪಿ ಜಿಲ್ಲೆ

ಸಂಜೆ :06.30: ಉಡುಪಿ (ರಸ್ತೆಯ ಮೂಲಕ)

ರಾತ್ರಿ :07.30: : ಬಜ್ಜೆ, ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ, ದಕ್ಷಿಣ ಕನ್ನಡ ಜಿಲ್ಲೆ ಬಜ್ಜೆ, ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ, ದಕ್ಷಿಣ ಕನ್ನಡ ಜಿಲ್ಲೆ

:07.45 (ವಿಶೇಷ ವಿಮಾನ ಮೂಲಕ)

:08.45 ಹೆಚ್.ಎ.ಎಲ್. ವಿಮಾನ ನಿಲ್ದಾಣ, ಬೆಂಗಳೂರು

ವಿಶೇಷ ಸೂಚನೆ:ಕೋವಿಡ್-19 (ಕೊರೋನಾ ವೈರಸ್) ಸಾಂಕ್ರಾಮಿಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಮಾನ್ಯ ಶಾಸಕರು, ಮಾನ್ಯ ಸಂಸತ್‌ ಸದಸ್ಯರು ಹಾಗೂ ಅಧಿಕಾರಿಗಳು (ಅತಿ ಕಡಿಮೆ ಸಂಖ್ಯೆಯಲ್ಲಿ) ಕಡ್ಡಾಯವಾಗಿ ಮಾಸ್‌ಗಳನ್ನು ಧರಿಸಿ, ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವಂತೆ ಕೋರಿದೆ.

ಮಲೆನಾಡು, ಕೊಡಗು, ಕರಾವಳಿ ಹಾಗೂ ಉತ್ತರ ಕನ್ನಡ ಭಾಗದಲ್ಲಿ ಕಳೆದ 10 ದಿನಗಳಿಂದ ವ್ಯಾಪಕವಾಗಿ ಮಳೆಯಾಗುತ್ತಿದೆ. ಈಗಾಗಲೇ ಸಂಬಂಧಿಸಿದ ಜಿಲ್ಲಾಧಿಕಾರಿಗಳೊಂದಿಗೆ ವೀಡಿಯೊ ಸಂವಾದ ಹಾಗೂ ನೆರವಾಗಿಯೂ ಮಾತನಾಡಿದ್ದು, ಮಳೆ ತಗ್ಗಿರುವುದರಿಂದ ಮಳೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಸ್ಥಿತಿ ಪರಿಶೀಲಿಸಿ, ಸ್ಥಿತಿಗತಿಯನ್ನು ಅವಲಂಬಿಸಿ ಪರಿಹಾರಕ್ಕೆ ಸೂಚನೆ ನೀಡಲಾಗುವುದು ಎಂದು ಅವರು ತಿಳಿಸಿರುವುದಾಗಿ ವರದಿಯಾಗಿದೆ.

Share This
300x250 AD
300x250 AD
300x250 AD
Back to top