ಕಾರವಾರ: ವಾಹನ ತಪಾಸಣೆ ಕರ್ತವ್ಯದಲ್ಲಿದ್ದ ಕಾರವಾರ ಸಂಚಾರ ಠಾಣೆಯ ಪಿಎಸ್ಐ ನಾಗಪ್ಪ ಮತ್ತು ಸಿಬ್ಬಂದಿಗಳನ್ನೊಳಗೊಂಡ ತಂಡ ಭಾರತೀಯ ಮೋಟಾರು ವಾಹನ ಕಾಯ್ದೆಯಡಿ ಸಂಚಾರ ನಿಯಮ ಉಲ್ಲಂಘಿಸಿದ ವಾಹನಗಳನ್ನು ಜಪ್ತಿಪಡಿಸಿಕೊಂಡು ಆರೋಪಿತರ ವಿರುದ್ದ ಕಾರವಾರದ ಹಿರಿಯ ಸಿವಿಲ್ ಹಾಗೂ ಸಿಜೆಎಮ್ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ಪ್ರಕರಣಗಳ ವಿಚಾರಣೆ ನಡೆಸಿದ ನ್ಯಾಯಾಧೀಶೆ ಶ್ರೀಮತಿ ರೇಷ್ಮಾ ರೊಡ್ರಿಗೇಸ್ ಅಪ್ರಾಪ್ತ ಬಾಲಕ ವಾಹನ ಚಾಲನೆ ಮಾಡಲು ವಾಹನ ನೀಡಿದ್ದ ಪ್ರಕರಣದಲ್ಲಿ ಮಾಲಿಕ ರೇಷ್ಮಾ ಅಲಿ ಶೇಖ್ ಗೆ 25,500 ರೂ ದಂಡ ವಿಧಿಸಿದ್ದಾರೆ.
ಅಂತೆಯೇ ನಿಗದಿತ ಸಾಮರ್ಥ್ಯ ಕ್ಕಿಂತ ಹೆಚ್ಚಿನ ಸರಕು ಸಾಗಣೆ ಮಾಡಿದ್ದ ಪ್ರಕರಣದಲ್ಲಿ 29,100/- ದಂಡ ಹಾಗೂ ಇನ್ನೊಂದು ವಾಹನ ಮಾಲೀಕರಿಗೆ ರೂ 24,000/- ದಂಡ, ಸಾರಾಯಿ ಕುಡಿದು ವಾಹನ ಚಲಾಯಿಸಿದ ಪ್ರಕರಣದಲ್ಲಿ ಜನಾರ್ಧನ ವೆಂಕಟೇಶಗೆ ರೂ-10000/- ದಂಡದಂತೆ ಹೀಗೆ ಒಟ್ಟು ನಾಲ್ಕು ಪ್ರಕರಣಗಳಲ್ಲಿ ನ್ಯಾಯಾಲಯವು ಆರೋಪಿತರಿಗೆ ಒಟ್ಟು ರೂ 88,600/-ದಂಡ ವಿಧಿಸಿದೆ.
ಕಾರವಾರ ಸಂಚಾರ ಠಾಣೆಯ ಪಿಎಸ್ಐ ನಾಗಪ್ಪ ಮತ್ತು ಸಿಬ್ಬಂದಿಗಳ ಕಾರ್ಯಕ್ಕೆ ಪೊಲೀಸ್ ಅಧೀಕ್ಷಕಿ ಸುಮನ್ ಡಿ ಪೆನ್ನೆಕರ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಬದರಿನಾಥ ಎಸ್ , ವಾಲೆಂಟೈನ್ ಡಿಸೋಜಾ, ಸಿದ್ದಪ್ಪ ಬಿಳಗಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ