
ಯಲ್ಲಾಪುರ: ತಾಲೂಕಿನ ಸರಕಾರಿ ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಾಣ ಮಾಡಲಾಗಿರುವ ಡಯಾಲಿಸಿಸ್ ಕೇಂದ್ರವನ್ನು ಗುರುವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಿದರು.
ಯುವ ನಾಯಕ ವಿವೇಕ್ ಹೆಬ್ಬಾರ್ ತಮ್ಮ ಸಂಸ್ಥೆಯ ಮೂಲಕವಾಗಿ ಸುಮಾರು 25 ಲಕ್ಷ ರೂಪಾಯಿ ವೆಚ್ಚದಲ್ಲಿ ಆರ್.ಓ.ಪ್ಲಾಂಟ್ ಹಾಗೂ ಅತ್ಯಾಧುನಿಕ ತಂತ್ರಜ್ಞಾನ ಹೊಂದಿರುವ ವೈದ್ಯಕೀಯ ಪರಿಕರಗಳು ಹೊಂದಿರುವ ಸುಸಜ್ಜಿತ ಡಯಾಲಿಸಿಸ್ ಘಟಕವನ್ನು ಯಲ್ಲಾಪುರದ ಸರಕಾರಿ ಆಸ್ಪತ್ರೆಯಲ್ಲಿ ನಿರ್ಮಾಣ ಮಾಡಿದ್ದಾರೆ. ಮುಖ್ಯಮಂತ್ರಿಗಳ ಮೂಲಕ ಡಯಾಲಿಸಿಸ್ ಘಟಕವನ್ನು ಸರಕಾರಕ್ಕೆ ಹಸ್ತಾಂತರಿಸಿದ ಬಗ್ಗೆ ಶಾಸಕ ಶಿವರಾಮ ಹೆಬ್ಬಾರ್ ಅವರು ಹಾಗೂ ಯುವ ನಾಯಕ ವಿವೇಕ್ ಹೆಬ್ಬಾರ್ ಹರ್ಷ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಶಾಸಕ ಶಿವರಾಮ ಹೆಬ್ಬಾರ್, ವಿಧಾನಪರಿಷತ ಸದಸ್ಯ ಶಾಂತಾರಾಮ ಸಿದ್ದಿ, ವಾಯುವ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ವಿ.ಎಸ್. ಪಾಟೀಲ್ ಹಾಗೂ ಪಕ್ಷದ ವಿವಿಧ ಸ್ತರದ ಪದಾಧಿಕಾರಿಗಳು, ಕಾರ್ಯಕರ್ತರು ಅಧಿಕಾರಿಗಳು ಉಪಸ್ಥಿತರಿದ್ದರು.