• Slide
  Slide
  Slide
  previous arrow
  next arrow
 • ಜನತಾ ವಿದ್ಯಾಲಯ ಪ್ರೌಢಶಾಲೆಯಲ್ಲಿ ಸಂಸತ್ ಉದ್ಘಾಟನಾ ಸಮಾರಂಭ

  300x250 AD

  ದಾಂಡೇಲಿ: ನಗರದ ಜನತಾ ವಿದ್ಯಾಲಯ ಪ್ರೌಢಶಾಲೆಯಲ್ಲಿ 2022-23ನೇ ಸಾಲಿನ ಶಾಲಾ ಸಂಸತ್ತು ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭವು ಶುಕ್ರವಾರ ಜನತಾ ವಿದ್ಯಾಲಯದ ಬೆಳ್ಳಿಹಬ್ಬ ಸಭಾಭವನದಲ್ಲಿ ಜರುಗಿತು.

  ಶಾಲಾ ಸಂಸತ್ತು ಮತ್ತು ಸಾಂಸ್ಕೃತಿಕ ಚಟುವಟಿಕೆಗಳನ್ನು ಉದ್ಘಾಟಿಸಿ ಮಾತನಾಡಿದ ಜನತಾ ಸಂಯುಕ್ತ ಪದವಿಪೂರ್ವ ವಿದ್ಯಾಲಯದ ಪ್ರಾಚಾರ್ಯರಾದ ಎಂ.ಎಸ್.ಇಟಗಿಯವರು ಪ್ರಜಾಪ್ರಭುತ್ವ ವ್ಯವಸ್ಥೆಯ ಬಗ್ಗೆ ಅರಿವಿರಬೇಕೆಂಬ ಉದ್ದೇಶದಿಂದ ಶಾಲೆಯಲ್ಲಿ ಸಂಸತ್ತನ್ನು ರಚಿಸಲಾಗುತ್ತದೆ. ಇದು ವಿದ್ಯಾರ್ಥಿಗಳಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ತಿಳಿದುಕೊಳ್ಳಲು ಪ್ರೇರಣಾದಾಯಿಯಾಗಿದೆ. ಇನ್ನೂ ವಿದ್ಯಾರ್ಥಿಗಳ ಪ್ರತಿಭೆಗಳನ್ನು ಮುಖ್ಯಭೂಮಿಕೆಗೆ ತರಲು ಸಾಂಸ್ಕೃತಿಕ ಚಟುವಟಿಕೆಗಳು ಮಹತ್ವದ ಪಾತ್ರವನ್ನು ವಹಿಸುತ್ತದೆ. ವಿದ್ಯಾರ್ಥಿಗಳು ಸಕ್ರೀಯರಾಗಿ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಭಾಗವಹಿಸುವಂತೆ ಕರೆ ನೀಡಿದರು.

  ಮುಖ್ಯ ಅತಿಥಿಗಳಾಗಿ ಶಿಕ್ಷಣ ಸಂಯೋಜಕರಾದ ಜೇಮ್ಸ್ ಡಿಸೋಜಾ ಅವರು ಮಾತನಾಡಿ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾಗಿ ಶಾಲೆಗಳಲ್ಲಿ ವಿವಿಧ ಉಪಯುಕ್ತ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗುತ್ತಿದ್ದು, ವಿದ್ಯಾರ್ಥಿಗಳು ಆಸಕ್ತಿಯಿಂದ ಭಾಗವಹಿಸಬೇಕೆಂದರು. ಅಧ್ಯಕ್ಷತೆಯನ್ನು ಜನತಾ ಪ್ರೌಢಶಾಲೆಯ ಮುಖ್ಯೋಪಾಧ್ಯಯರಾದ ಕಿಶೋರ ಕಿಂದಳ್ಕರ್ ಅವರು ವಹಿಸಿ, ಶುಭ ಕೋರಿ ಮಾತನಾಡಿದರು.

  300x250 AD

  ವೇದಿಕೆಯಲ್ಲಿ ಪ್ರೌಢಶಾಲೆಯ ಹಿರಿಯ ಶಿಕ್ಷಕಿ ರೀಟಾ ಡಯಾಸ್, ಶಿಕ್ಷಕರುಗಳಾದ ಎಂ.ಬಿ.ಅರವಳ್ಳಿ, ಜಯದೇವ ಸಿರಿಗೇರಿ, ಭಾರತಿ ಗೌಡ, ಅಬ್ದುಲ್ ರಜಾಕ್ ಭಾಗವಾನ್, ಶಿವಾನಂದ ಸವಸುದ್ದಿ, ಗಣೇಶ್ ನಾಯಕ್, ಶಂಕರ್ ಕಿಲ್ಲೇಕರ, ವೀಣಾ ಪ್ರಕಾಶ ಮೇಹ್ತಾ, ಚಂದ್ರಕಾಂತ ಪೂಜಾರಿ, ಚಂದ್ರಶೇಖರ, ರೆಹನಾ, ಮುತ್ತಮ್ಮ ಮೊದಲಾದವರು ಉಪಸ್ಥಿತರಿದ್ದರು.

  Share This
  300x250 AD
  300x250 AD
  300x250 AD
  Leaderboard Ad
  Back to top