ಶಿರಸಿ : ಕರೋನಾ ಮಹಾಮಾರಿಯ ಕಾಲದಲ್ಲಿ ಮೊದಲ ಡೋಸ್ ಹಾಗೂ ಎರಡನೇ ಡೋಸ್ ಪಡೆದವರು ಆರೋಗ್ಯದ ಹಿತ ದೃಷ್ಟಿಯಿಂದ ಬೂಸ್ಟರ್ ಡೋಸ್ ಕಡ್ಡಾಯವಾಗಿ ಪಡೆಯಬೇಕು ಎಂದು ನಗರಸಭೆ ಅಧ್ಯಕ್ಷ ಗಣಪತಿ ನಾಯ್ಕ ಹೇಳಿದರು.
ತಾಲೂಕು ಆರೋಗ್ಯ ಅಧಿಕಾರಿ ಕಚೇರಿಯಲ್ಲಿ ಬೋಸ್ಟರ್ ಡೋಸ್ ನೀಡುವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕೇಂದ್ರ ಸರಕಾರ 18 – 59 ವರ್ಷದ ವರೆಗಿನವರಿಗೆ ಬೂಸ್ಟರ್ ಡೋಸ್ ಉಚಿತವಾಗಿ ನೀಡುತ್ತಿದ್ದು, ಎಲ್ಲರೂ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಇದೇ ಸಂದರ್ಭದಲ್ಲಿ ಶಿರಸಿ ಪೋಟೊಗ್ರಾಫರ್ಸ್ ಮತ್ತು ವಿಡಿಯೋ ಗ್ರಾಫರ್ಸ್ ಅಸೋಸಿಯೇಷನ್ ನ ಸದಸ್ಯರಿಗೆ ಬೂಸ್ಟರ್ ಡೋಸ್ ಲಸಿಕೆ ನೀಡಲಾಯಿತು. ವೇದಿಕೆಯಲ್ಲಿ ನಗರಸಭೆ ಉಪಾಧ್ಯಕ್ಷೆ ವೀಣಾ ಶೆಟ್ಟಿ, ತಾಲೂಕು ಆರೋಗ್ಯ ಅಧಿಕಾರಿ ಡಾ. ವಿನಾಯಕ ಭಟ್ ಇದ್ದರು.