• Slide
    Slide
    Slide
    previous arrow
    next arrow
  • ಪಿ. ಎಂ.ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ವನಮಹೋತ್ಸವ

    300x250 AD

    ಅಂಕೋಲಾ : ವನಮಹೋತ್ಸವ ಸಪ್ತಾಹ ದ ಅಂಗವಾಗಿ ಪಿ. ಎಂ. ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ವನಹೋತ್ಸವವನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯಾಧ್ಯಾಪಕರಾದ ಶ್ರೀಮತಿ ಕೋಮಲ್ ಹಿರೇಮಠ ಅವರು ಗಿಡಕ್ಕೆ ನೀರೆರೆಯುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿ ಶಾಲಾ ಮಟ್ಟದಲ್ಲಿ ಇದರ ಆಚರಣೆ ಮಹತ್ವವನ್ನು ತಿಳಿಸಿದರು.

    ವಿದ್ಯಾರ್ಥಿಗಳು ಗಿಡ-ಮರಗಳ ಪ್ರಯೋಜನವನ್ನು ಮತ್ತು ಅವುಗಳ ನಾಶದಿಂದಾಗಿ ಪ್ರಕೃತಿಯ ಮೇಲಾಗುವ ದುಷ್ಪರಿಣಾಮವನ್ನು ಮೂಕಾಭಿನಯದ ಮೂಲಕ ಮನಮುಟ್ಟುವಂತೆ ತಿಳಿಸಿದರು. ವಿಜ್ಞಾನ ಶಿಕ್ಷಕಿಯರಾದ ಶ್ರೀಮತಿ ಹೀನಾ ಶೇಖ್ ಅವರು ಕಾರ್ಯಕ್ರಮವನ್ನು ನಿರ್ವಹಿಸಿದರು.
    10 ನೇ ತರಗತಿಯ ವಿದ್ಯಾರ್ಥಿಗಳಾದ ಕುಮಾರಿ ಮನೀಷಾ ನಾಯ್ಕ ಸ್ವಾಗತಿಸಿ, ಕುಮಾರ ನೇಸರ ಕವರಿ ಎಲ್ಲರನ್ನು  ವಂದಿಸಿದರು. ಶಾಲೆಯ ಎಲ್ಲ ಶಿಕ್ಷಕ ಮತ್ತು ಶಿಕ್ಷಕೇತರ ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top