Slide
Slide
Slide
previous arrow
next arrow

ವಿದ್ಯಾರ್ಥಿಗಳು ಇಷ್ಟಪಟ್ಟು ಓದಿದರೆ ಯಶಸ್ಸು ಕಟ್ಟಿಟ್ಟ ಬುತ್ತಿ: ಉಪೇಂದ್ರ ಪೈ

300x250 AD

ಶಿರಸಿ: ವಿದ್ಯಾರ್ಥಿಗಳು ಕಷ್ಟಪಟ್ಟು ಓದುವುದಕ್ಕಿಂತ ಇಷ್ಟಪಟ್ಟು ಓದಿದರೆ ಯಶಸ್ಸು ಕಟ್ಟಿಟ್ಟ ಬುತ್ತಿ ಎಂದು ಉಪೇಂದ್ರ ಪೈ ಸೇವಾ ಟ್ರಸ್ಟ್ ಅಧ್ಯಕ್ಷ ಉಪೇಂದ್ರ ಪೈ ಹೇಳಿದರು.

ಅವರು ತಾಲೂಕಿನ ಬೈರುಂಬೆ ಶಾರದಾಂಬ ಪ್ರೌಢಶಾಲೆಯ 285 ವಿದ್ಯಾರ್ಥಿಗಳಿಗೆ ತಮ್ಮ ಟ್ರಸ್ಟ್ ವತಿಯಿಂದ ಉಚಿತ ಪಠ್ಯ ಪುಸ್ತಕ, ಕ್ರೀಡಾ ಸಾಮಗ್ರಿ, ವ್ಯಾಲಿ ಬಾಲ್ ನೆಟ್, ವಿತರಿಸಿ ನಂತರ ಮಾತನಾಡಿ, ವಿದ್ಯಾರ್ಥಿಗಳು ಮುಂದಿನ ದಿನಗಳಲ್ಲಿ ಎಷ್ಟೇ ದೊಡ್ಡ ಹುದ್ದೆಯನ್ನು ಪಡೆದುಕೊಂಡರೂ, ವಿದ್ಯೆ ಕಲಿಸಿದ ಗುರು ಹಾಗೂ ಹೆತ್ತವರನ್ನು ಎಂದಿಗೂ ಮರೆಯಬಾರದು. ನೀವು ಚೆನ್ನಾಗಿ ಓದಿ ದೊಡ್ಡವರಾದ ಮೇಲೆ ಉತ್ತಮ ಹುದ್ದೆಗಳನ್ನು ಪಡೆದುಕೊಂಡು, ಇದೇ ರೀತಿ ಶಾಲೆಗಳಿಗೆ, ಸಮಾಜಕ್ಕೆ ನಿಮ್ಮಿಂದಾಗುವಷ್ಟು ಸಹಾಯವನ್ನು ನೀಡಿ ಅವರ ನಗುವಿಗೆ ಕಾರಣರಾಗಿ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಪೋಷಕರು ಎಷ್ಟೇ ಬಡವರಾಗಿದ್ದರೂ, ಮಕ್ಕಳು ವಿದ್ಯಾವಂತರಾಗಿ, ಒಳ್ಳೆಯ ಉದ್ಯೋಗಕ್ಕೆ ಸೇರಿ ಸುಂದರವಾದ ಜೀವನವನ್ನು ರೂಪಿಸಿಕೊಳ್ಳಲಿ ಎಂದು ಕಷ್ಟ ಪಟ್ಟು ಶಾಲಾ ಕಾಲೇಜುಗಳಿಗೆ ಸೇರಿಸುತ್ತಾರೆ. ಅದೇ ರೀತಿ ಶಿಕ್ಷಕರು, ಉಪನ್ಯಾಸಕರು ಸಹ ವಿದ್ಯಾರ್ಥಿಗಳಿಗೆ ಪಾಠ ಪ್ರವಚನ ಮಾಡುವ ಮೂಲಕ ಉತ್ತಮ ಶಿಕ್ಷ ಣ ನೀಡಲು ಶ್ರಮಿಸುತ್ತಾರೆ. ಈ ಎರಡು ವರ್ಗದವರು ವಿದ್ಯಾರ್ಥಿಗಳಿಂದ ಯಾವುದೇ ನೀರಿಕ್ಷೆಯನ್ನು ಇಟ್ಟುಕೊಳ್ಳದೆ ನೀರಾಪೇಕ್ಷೆಯಿಂದ ತಮ್ಮ ಕರ್ತವ್ಯವನ್ನು ನಿರ್ವಹಿಸುತ್ತಾರೆ. ವಿದ್ಯಾರ್ಥಿಗಳು ತಮ್ಮ ಪೋಷಕರಿಗೆ, ಶಿಕ್ಷಕರ ಶ್ರಮಕ್ಕೆ ತಕ್ಕ ಬೆಲೆಯನ್ನು ನೀಡಲು ಶ್ರದ್ಧೆಯಿಂದ ವಿದ್ಯಾಭ್ಯಾಸ ನಡೆಸಿ, ಹೆಚ್ಚು ಅಂಕಗಳನ್ನು ಪಡೆದು ಉತ್ತಮ ಜೀವನವನ್ನು ರೂಪಿಸಿಕೊಳ್ಳಲು ಪ್ರಾಮಾಣಿಕ ಪ್ರಯತ್ನ ನಡೆಸಬೇಕು. ಉತ್ತಮ ಜ್ಞಾನ ಪಡೆದ ಮಗು ಸುಶಿಕ್ಷಿತ ಪ್ರಜೆಯಾಗಿ ರೂಪುಗೊಳ್ಳುವುದರಲ್ಲಿ ಸಂದೇಹವಿಲ್ಲ. ಸತ್ಪ್ರಜೆಗಳಿಂದ ಕೂಡಿದ ದೇಶ ಸಂಪದ್ಭರಿತವಾಗಿ ಬೆಳೆಯುವುದಲ್ಲದೆ, ಇತರೆ ದೇಶಗಳಿಗೂ ಮಾದರಿಯಾಗು ವುದು ಎಂದು ಹೇಳಿದರು.19 ವರ್ಷಗಳಿಂದ ತಮ್ಮ ಟ್ರಸ್ಟ್ ಮಕ್ಕಳ ಶಿಕ್ಷಣಕ್ಕಾಗಿ ಹಾಗೂ ಅವರ ಅನುಕೂಲಕ್ಕಾಗಿ ಪ್ರೋತ್ಸಾಹಿಸುತ್ತಿದೆ ಎಂದು ಹೇಳಿದರು.

300x250 AD

ಈ ಸಂದರ್ಭದಲ್ಲಿ ಶಾಲೆಯ ಮುಖ್ಯೋಪಾಧ್ಯಾಯ ವಿನಾಯಕ ಹೆಗಡೆ, ಶಾಲೆಯ ಹಳೆಯ ವಿದ್ಯಾರ್ಥಿ ಕೇಶವ ಹೆಗಡೆ, ಸಂಸ್ಕೃತ ಪ್ರಾಧ್ಯಾಪಕ, ಕ್ರೀಡಾ ಶಿಕ್ಷಕರು, ಶಿಕ್ಷಕ ವೃಂದದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Share This
300x250 AD
300x250 AD
300x250 AD
Back to top