ಯಲ್ಲಾಪುರ: ತಾಲೂಕಿನ ಮಾವಿನಮನೆ ಸಹಕಾರಿ ಸಂಘದ ಸಭಾಭವನದಲ್ಲಿ ಮಾವಿನಮನೆ ಗ್ರಾ.ಪಂನ ಗ್ರಾಮ ಸಭೆ ಅಧ್ಯಕ್ಷೆ ಮಂಗಲಾ ಕುಣಬಿ ಅಧ್ಯಕ್ಷತೆಯಲ್ಲಿ ನಡೆಯಿತು.
ಕಳೆದ ಹಲವು ದಿನಗಳಿಂದ ಮಾವಿನಮನೆ ಗ್ರಾ.ಪಂ ವ್ಯಾಪ್ತಿಯಲ್ಲಿ ವಿದ್ಯುತ್ ಅವ್ಯವಸ್ಥೆ ಉಂಟಾಗಿರುವ ಕುರಿತು ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ವಿದ್ಯುತ್ ವ್ಯತ್ಯಯದಿಂದ ಪ್ರತಿ ವರ್ಷ ಮಳೆಗಾಲದಲ್ಲಿ ಜನರು ಸಮಸ್ಯೆ ಅನುಭವಿಸುವಂತಾಗಿದೆ. ಹೆಸ್ಕಾಂ ಅಧಿಕಾರಿಗಳು ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡರು.
ಗ್ರಾಮೀಣ ಭಾಗದಲ್ಲಿ ವಿದ್ಯುತ್ ಸಮಸ್ಯೆ ಉಂಟಾದಾಗ 48 ಗಂಟೆಯೊಳಗೆ ಸರಿಪಡಿಸಲೇಬೇಕು. ಇಲ್ಲವಾದರೆ ಪ್ರತಿ ಮೀಟರ್ ಗೆ ತಲಾ 50 ರೂ ಪರಿಹಾರವನ್ನು ಅಧಿಕಾರಿಗಳು ನೀಡಬೇಕೆಂಬ ನಿಯಮವಿದೆ. ಆದರೆ ಪರಿಹಾರ ನೀಡುವುದಿರಲಿ, ನಮ್ಮ ಸಮಸ್ಯೆಗೆ ಸ್ಪಂದಿಸುವಷ್ಟು ವ್ಯವಧಾನವನ್ನೂ ಅಧಿಕಾರಿಗಳು ತೋರುತ್ತಿಲ್ಲ ಎಂದು ದೂರಿದರು. ಶೀಘ್ರದಲ್ಲಿ ವಿದ್ಯುತ್ ಸಮಸ್ಯೆ ಪರಿಹರಿಸುವುದಾಗಿ ಅಧಿಕಾರಿಗಳು ಭರವಸೆ ನೀಡಿದರು.
ವಿವಿಧ ಇಲಾಖೆಗಳ ಅಧಿಕಾರಿಗಳು ಮಾಹಿತಿ ನೀಡಿದರು. ಗ್ರಾ.ಪಂ ಉಪಾಧ್ಯಕ್ಷ ಸುಬ್ಬಣ್ಣ ಕುಂಟೆಗಾಳಿ, ಸದಸ್ಯರಾದ ದೀಪಕ ಭಟ್ಟ, ಪಾರ್ವತಿ ಭಟ್ಟ ಮುಂತಾದವರಿದ್ದರು.