ಕಾರವಾರ: ರೈತರಿಗೆ ನೀರಿನ ಸದ್ಬಳಕೆ ಕುರಿತು ಮಾಹಿತಿ ನೀಡಿ, ಯುವಕರಿಗೆ ವಿವಿಧ ಬೆಳೆ ಬೆಳೆಯಲು ತರಬೇತಿ ನೀಡಿ ನಿರಂತರ ಆದಾಯ ಬರುವಂತೆ ಮಾಡುವ ಕಾರ್ಯವಾಗಬೇಕೆಂದು ಕೇಂದ್ರ ಸರಕಾರದ ಉಪ ಕಾರ್ಯದರ್ಶಿ ಅಂಕಿತ ಮಿಶ್ರಾ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಿಯಾಂಗಾ ಎಂ. ಅವರಿಗೆ ತಿಳಿಸಿದರು.
ನಗರದ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಮಂಗಳವಾರ ಕೇಂದ್ರ ಸರಕಾರದ ಉಪಕಾರ್ಯದರ್ಶಿ ಅಂಕಿತ ಮಿಶ್ರಾ ವಿಜ್ಞಾನಿ ಎನ್.ಎ. ಸೋನಾವಾನೆ ಅವರನ್ನೊಳಗೊಂಡ ಜಲಶಕ್ತಿ ತಂಡದೊಂದಿಗೆ ಕೇಂದ್ರ ಸರಕಾರದ ಮಹತ್ವಾಕಾಂಕ್ಷಿ ಯೋಜನೆ ಜಲಶಕ್ತಿ ಅಭಿಯಾನದಡಿ ಕೈಗೊಂಡ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ಸಭೆ ನಡೆಯಿತು.
ಜುಲೈ 19 ರಿಂದ 21 ರವರೆಗೆ ಜಿಲ್ಲೆಯಲ್ಲಿನ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಲಿರುವ ಜಲಶಕ್ತಿ ಕೇಂದ್ರ ತಂಡದ ಸದಸ್ಯರಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ., ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಿಯಾಂಗಾ ಎಂ ಅವರು ಜಲಶಕ್ತಿ ಅಭಿಯಾನದಡಿ ಜಿಲ್ಲೆಯಾದ್ಯಂತ ಕೈಗೊಂಡ ಕಾಮಗಾರಿಗಳ ಕುರಿತು ಪಿಪಿಟಿ ಮೂಲಕ ವಿವರಿಸಿದರು. ಕೇಂದ್ರ ತಂಡ ಸಭೆಗೂ ಮುನ್ನ ಕೃಷಿ ಇಲಾಖೆಯಲ್ಲಿನ ಜಲಶಕ್ತಿ ಯೋಜನೆಯ ಮಾಹಿತಿ ಒಳಗೊಂಡ ಜಲಶಕ್ತಿ ಕೇಂದ್ರಕ್ಕೆ ಭೇಟಿನೀಡಿ, ಕೇಂದ್ರಲ್ಲಿನ ಕಾರವಾರ ತಾಲೂಕಿನ ಹಣಕೋಣ ಗ್ರಾಮ ಪಂಚಾಯತಿ ವ್ಯಾಪ್ತಿಯ ಭೀಮ್‌ಕೋಲ್ ಕೆರೆ, ಅಂಕೋಲಾ ತಾಲೂಕಿನ ಅಗಸೂರ ಗ್ರಾಮ ಪಂಚಾಯತಿ ವ್ಯಾಪ್ತಿಯ ಬಿಂದಿಗೆ ಕಾರ್ಯಕ್ರಮ ಅಭಿವೃದ್ಧಿ ಕಾಮಗಾರಿ ಪ್ರಾತ್ಯಕ್ಷಿಕೆ ಸೇರಿದಂತೆ ವಿವಿಧ ಮಾಹಿತಿ ಪರಿಕರಗಳನ್ನು ವೀಕ್ಷಿಸಿದರು.
ನಂತರ ಕಾರವಾರ ತಾಲೂಕಿನ ಭೀಮ್‌ಕೋಲ್ ಕೆರೆ, ಕೋಡಿಭಾಗದಲ್ಲಿರುವ ಅರಣ್ಯ ಇಲಾಖೆಯ ಸಾಮಾಜಿಕ ವಲಯದ ಸಸ್ಯ ಪಾಲನಾ ಕೇಂದ್ರ, ಚಂಡಿಯಾದ ಕೇಶವ ದೇವಸ್ಥಾನದ ಕಲ್ಯಾಣಿ, ಅಂಕೋಲಾ ತಾಲೂಕಿನ ವಂದಿಗೆ ಗ್ರಾ.ಪಂ ವ್ಯಾಪ್ತಿಯ ಗೋಳೆ ಗ್ರಾಮದ ಹಿರಿಯ ಪ್ರಾಥಮಿಕ ಶಾಲಾ ಆವಣದಲ್ಲಿ ಜಲ ಚೇತನ ಧಾಮ ವನನಿರ್ಮಾಣ, ಅಮೃತ ಸರೋವರ ಕೆರೆ ಅಭಿವೃದ್ಧಿ, ಸುಂಕಸಾಳ ಗ್ರಾಪಂ ವ್ಯಾಪ್ತಿಯಲ್ಲಿನ ವೆಂಟೆಡ್ ಡ್ಯಾಂ ಮತ್ತು ಫುಟ್ ಬ್ರಿಜ್ ಕಾಮಗಾರಿ, ಅಂಕೋಲಾ ತಾಲೂಕಿನ ಹಟ್ಟಿಕೇರಿ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಕೆರೆ ನಿರ್ಮಾಣ ಕಾಮಗಾರಿ, ಅಗಸೂರ ಗ್ರಾ.ಪಂ ವ್ಯಾಪ್ತಿಯಲ್ಲಿನ ಬಿಂದಿಗೆ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದರು.
ಜಿಲ್ಲೆಯಲ್ಲಿ ಕೈಗೊಳ್ಳಲಾದ ಅಭಿವೃದ್ಧಿ ಕಾರ್ಯಗಳ ಬಗ್ಗೆ ವಿವರ ತಿಳಿದಕೊಂಡ ಅವರು, ಒಳ್ಳೆಯ ಕಾರ್ಯಗಳನ್ನು ಸಾರ್ವಜನಿಕರಿಗೆ ತಲುಪಿಸುವಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಅವರ ಪಾತ್ರ ಮಹತ್ವದ್ದಾಗಿದೆ ಎಂದ ಅವರು ಅಧಿಕಾರಿಗಳು ಕ್ರಿಯಾಶೀಲರಾಗಿದ್ದು, ಮುಂಬರುವ ದಿನಗಳಲ್ಲಿ ಇನ್ನೂ ಹೆಚ್ಚಿನ ಕಾರ್ಯಕ್ರಮಗಳನ್ನು ಜಾರಿಗೆ ತಂದು ಸಾರ್ವಜನಿಕರಿಗೆ ಅದರ ಕುರಿತು ಮಾಹಿತಿ ನೀಡಿ ಯೋಜನೆಯ ಲಾಭ ಪಡೆಯುವಂತೆ ಪ್ರೋತ್ಸಾಹಿಸಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್‌ನ ಮುಖ್ಯ ಲೆಕ್ಕಾಧಿಕಾರಿ ಸತೀಶ್ ಪವಾರ್, ಮುಖ್ಯ ಯೋಜನಾಧಿಕಾರಿ ವಿನೋದ ಅಣೇಕರ್, ಅಭಿವೃದ್ಧಿ ವಿಭಾಗದ ಉಪ ಕಾರ್ಯದರ್ಶಿ ದಿಲೀಪ್ ಜಕ್ಕಪ್ಪಗೋಳ್, ಅರಣ್ಯ ಇಲಾಖೆಯ ಸಾಮಾಜಿ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಮಂಜುನಾಥ ನಾವಿ, ಅಂಕೋಲಾ ಹಾಗೂ ಕಾರವಾರ ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳಾದ ಪಿ. ವೈ. ಸಾವಂತ, ಡಾ. ಬಾಲಪ್ಪನವರ ಆನಂದಕುಮಾರ ನರೇಗಾ ಸಹಾಯಕ ನಿರ್ದೇಶಕ ರಾಮದಾಸ್ ನಾಯ್ಕ ಹಾಗೂ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು, ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು, ಜಿಲ್ಲಾ ಕಾರ್ಯಕ್ರಮ ಸಂಯೋಜಕ ನಾಗರಾಜ ನಾಯ್ಕ, ಡಿಇಸಿ ಸಚಿನ್ ಬಂಟ್, ಡಿಎಂಐಎಸ್ ಶಿವಾಜಿ ಬೊಬ್ರಿ, ತಾಂತ್ರಿಕ ಸಂಯೋಜಕರಾದ ಅನಿಲ ಗಾಯತ್ರಿ, ಸೂರಜ್ ಗುನಗಿ, ತಾಲೂಕಾ ಐಇಸಿ ಸಂಯೋಜಕ ಫಕ್ಕೀರಪ್ಪ ತುಮ್ಮಣ್ಣನವರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.