Slide
Slide
Slide
previous arrow
next arrow

ಬಾರ್ಡೋಲಿ ಗೌರವ’ ಪ್ರಶಸ್ತಿಗೆ ಪತ್ರಕರ್ತ ಗಜಾನನ ಆಯ್ಕೆ

300x250 AD

ಅಂಕೋಲಾ: ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆಯಂದು ಮಾಧ್ಯಮ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಮತ್ತು ಸಲ್ಲಿಸಿದ ಜಿಲ್ಲೆಯ ಪತ್ರಕರ್ತರಿಗೆ ನೀಡಲಾಗುವ ‘ಬಾರ್ಡೋಲಿ ಗೌರವ’ ಪ್ರಶಸ್ತಿಗೆ ಗೋಕರ್ಣದ ಪತ್ರಕರ್ತ ಗಜಾನನ ನಾಯಕ ಆಯ್ಕೆಯಾಗಿದ್ದಾರೆ.

ತಾಲೂಕು ಪತ್ರಕರ್ತರ ಸಂಘದ ಪತ್ರಿಕಾ ದಿನಾಚರಣೆಯ ಕುರಿತು ಪತ್ರಕರ್ತರ ಸಂಘದ ಅಧ್ಯಕ್ಷ ರಾಘು ಕಾಕರಮಠ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಬಾವಿ ಸಭೆಯಲ್ಲಿ 2022ನೇ ವರ್ಷದ ಬಾರ್ಡೋಲಿ ಗೌರವ ಪ್ರಶಸ್ತಿಗೆ ಹಿರಿಯ ಪತ್ರಕರ್ತ ಗಜಾನನ ರಾಮಾ ಅವರನ್ನು ಆಯ್ಕೆ ಮಾಡಲಾಯಿತು.

ಮೂಲತಃ ಕುಮಟಾ ತಾಲೂಕಿನ ಗೋನೆಹಳ್ಳಿಯವರಾದ ಗಜಾನನ ನಾಯಕ ಅವರು ಕಳೆದ 26 ವರ್ಷಗಳಿಂದ ವಿವಿಧ ಪತ್ರಿಕೆಯಲ್ಲಿ ವರದಿಗಾರರಾಗಿ ಸೇವೆ ಸಲ್ಲಿಸಿದ್ದರು. ಪ್ರಸ್ತುತ ವಿಜಯ ಕರ್ನಾಟಕ ದಿನಪತ್ರಿಕೆಯ ಗೋಕರ್ಣದ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

300x250 AD

ಜುಲೈ 21ರಂದು ಅಂಕೋಲಾದ ಪೂಜಗೇರಿಯ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಿರುವ ಪತ್ರಿಕಾ ದಿನಾಚರಣೆಯಲ್ಲಿ ಈ ಪ್ರಶಸ್ತಿಯನ್ನು ಪ್ರಧಾನ ಮಾಡಲಾಗುವದು ಎಂದು ಪತ್ರಕರ್ತರ ಸಂಘದ ಅಧ್ಯಕ್ಷ ರಾಘು ಕಾಕರಮಠ, ಕಾರ್ಯದರ್ಶಿ ಸುಭಾಷ ಕಾರೇಬೈಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This
300x250 AD
300x250 AD
300x250 AD
Back to top