Slide
Slide
Slide
previous arrow
next arrow

ಶಿಥಿಲಾವಸ್ಥೆ ತಲುಪಿದ ಹಾಳದಕಟ್ಟಾ ಶಾಲೆ:ನೂತನ ಕಟ್ಟಡಕ್ಕೆ ಸ್ಪೀಕರ್’ಗೆ ಮನವಿ

300x250 AD

ಸಿದ್ದಾಪುರ: ಶಾಲೆಯ ಕೊಠಡಿಗಳು ಶಿಥಿಲಾವಸ್ಥೆ ತಲುಪಿದ್ದು, ಹೊಸ ಕೊಠಡಿಗಳನ್ನು ನಿರ್ಮಿಸಿಕೊಡುವಂತೆ ಕೋರಿ ಹಾಳದಕಟ್ಟಾ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಸ್‌ಡಿಎಮ್‌ಸಿ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಬುಧವಾರ ತಾಲ್ಲೂಕಿಗೆ ನೆರೆ ಹಾವಳಿ ಸಮಸ್ಯೆ ಕುರಿತು ಸಭೆಯಲ್ಲಿ ಭಾಗವಹಿಸಲು ಆಗಮಿಸಿದ್ದ ಸಭಾಧ್ಯಕ್ಷ ಹಾಗೂ ಕ್ಷೇತ್ರದ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಭೇಟಿಯಾಗಿ ಸಮಸ್ಯೆಯ ಬಗ್ಗೆ ವಿವರಿಸಿ ಬಳಿಕ ಮನವಿ ಸಲ್ಲಿಸಿದರು.

ಸರಕಾರದ ಆದೇಶದಂತೆ ಈಗಾಗಲೇ 1ರಿಂದ 3ನೇ ತರಗತಿಯವರೆಗೆ ಇಂಗ್ಲಿಷ್ ಮಾಧ್ಯಮದಲ್ಲಿ ಹಾಗೂ 1ರಿಂದ 7ನೇ ತರಗತಿವರೆಗೆ ಕನ್ನಡ ಮಾಧ್ಯಮದಲ್ಲಿ 200ಕ್ಕೂ ಅಧಿಕ ಸಂಖ್ಯೆಯಲ್ಲಿ ಮಕ್ಕಳು ಈ ಶಾಲೆಯಲ್ಲಿ ಓದುತ್ತಿದ್ದಾರೆ. ಈ ಕಾರಣಕ್ಕಾಗಿ ಕೊಠಡಿಗಳ ಸಂಖ್ಯೆ ಕಡಿಮೆಯಿದ್ದು, ಈಗಾಗಲೇ ಹಳೆಯದಾದ ಇಲ್ಲಿನ 2 ಕೊಠಡಿಗಳು ಕಳೆದ ಸಾಲಿನಲ್ಲಿ ಗಾಳಿ-ಮಳೆಯಿಂದಾಗಿ ಪೂರ್ತಿಯಾಗಿ ಶಿಥಿಲಗೊಂಡಿರುವ ಪರಿಣಾಮ ಅವುಗಳನ್ನು ನೆಲಸಮ ಮಾಡಲಾಗಿದೆ. ಅಗತ್ಯವಿದ್ದ ಹೊಸ 8 ಕೊಠಡಿಗಳನ್ನು ತುರ್ತಾಗಿ ನಿರ್ಮಿಸಿಕೊಡುವಂತೆ ಮನವಿಯಲ್ಲಿ ತಿಳಿಸಿದ್ದಾರೆ.

ಈ ವೇಳೆ ಪಟ್ಟಣ ಪಂಚಾಯತಿ ಉಪಾಧ್ಯಕ್ಷ ರವಿಕುಮಾರ್ ನಾಯ್ಕ, ಶಾಲೆಯ ಎಸ್‌ಡಿಎಮ್‌ಸಿ ಅಧ್ಯಕ್ಷ ರಾಘವೇಂದ್ರ ರಾಯ್ಕರ್, ಸದಸ್ಯರು ಹಾಗೂ ಮಕ್ಕಳ ಪಾಲಕರು ಇದ್ದರು.

300x250 AD

200 ಮಕ್ಕಳಿರುವ ಶಾಲೆಗೆ ಸರಿಯಾದ ಕೊಠಡಿ ವ್ಯವಸ್ಥೆ ಇಲ್ಲ. ಮಳೆಗಾಲದಲ್ಲಿ ಎಲ್ಲಾ ಕಡೆ ಸೋರುತ್ತದೆ. ಮಳೆಯಿಂದ ಸೋರುತ್ತಿರುವ ಕಾರಣ ಮೇಲೆ ಪ್ಲಾಸ್ಟಿಕ್ ಹಾಕಿ ಮುಚ್ಚಲಾಗಿದೆ. ಶಾಸಕರು ಈ ಬಗ್ಗೆ ಗಮನ ಹರಿಸಿ ಸೂಕ್ತ ಅನುದಾನ ಕೊಡಿಸಿ, ಸಮಸ್ಯೆಯನ್ನು ಆದಷ್ಟು ಬೇಗನೆ ಬಗೆಹರಿಸಬೇಕಿದೆ.– · ರಾಘವೇಂದ್ರ ರಾಯ್ಕರ್, ಎಸ್‌ಡಿಎಮ್‌ಸಿ ಅಧ್ಯಕ್ಷ

Share This
300x250 AD
300x250 AD
300x250 AD
Back to top