ಕಾರವಾರ: ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ, ಜವಾಹರ್‌ಲಾಲ್ ನೆಹರು ತಾರಾಲಯ, ಇಸ್ರೋ ಹಾಗೂ ಕಾರವಾರದ ಉಪ-ಪ್ರಾದೇಶಿಕ ವಿಜ್ಞಾನ ಕೇಂದ್ರದ ಸಹಯೋಗದಲ್ಲಿ ಅಂತರರಾಷ್ಟ್ರೀಯ ಚಂದ್ರ ದಿನವನ್ನು ಅಂತರ್ಜಾಲದ ಮುಖಾಂತರ ಕಾರವಾರದ ಉಪ-ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಯಿತು.
ಇಸ್ರೋ ಮಾಜಿ ಅಧ್ಯಕ್ಷ ಡಾ.ಎ.ಎಸ್.ಕಿರಣ್‌ಕುಮಾರ್ ಉದ್ಘಾಟಿಸಿದರು. ಜವಾಹರ್ ಲಾಲ್ ನೆಹರು ತಾರಾಲಯದ ನಿರ್ದೇಶಕ ಪ್ರಮೋದ ಗಲಗಲಿ, ವೈಜ್ಞಾನಿಕ ಅಧಿಕಾರಿ ಲಕ್ಷ್ಮಿ ಬಿ.ಆರ್., ಸಹಾಯಕ ನಿರ್ದೇಶಕ ಎಚ್.ಆರ್.ಮಧುಸೂದನ್ ಪಾಲ್ಗೊಂಡಿದ್ದರು. ಕಾರವಾರ ತಾಲೂಕಿನ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಭಾಗವಹಿಸಿದ್ದರು. ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಚಟುವಟಿಕೆಗಳ ಕಿಟ್ ಹಾಗೂ ಪ್ರಮಾಣ ಪತ್ರವನ್ನು ನೀಡಲಾಯಿತು.