• Slide
    Slide
    Slide
    previous arrow
    next arrow
  • ಶಾಲಾ ಸಂಸತ್ತು ಮತ್ತು ವಿವಿಧ ಸಂಘಗಳ ಉದ್ಘಾಟನಾ ಕಾರ್ಯಕ್ರಮ

    300x250 AD

    ಕಾರವಾರ: ಪಟ್ಟಣದ ಸರಕಾರಿ ಪ್ರೌಢಶಾಲೆಯಲ್ಲಿ 2022-23 ನೇ ಸಾಲಿನ ಶಾಲಾ ಸಂಸತ್ತು ಮತ್ತು ವಿವಿಧ ಸಂಘಗಳ ಉದ್ಘಾಟನಾ ಕಾರ್ಯಕ್ರಮ ನೆರವೇರಿತು. ಸಹಕಾರಿ ಧುರೀಣರಾದ ಡಿ. ಎನ್. ನಾಯಕ ಕಾರ್ಯಕ್ರಮವನ್ನು ಉದ್ಘಾಟಿಸಿದರು ಹಾಗೂ 2022 ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ. 85 ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ಎಲ್ಲ ವಿದ್ಯಾರ್ಥಿಗಳಿಗೆ ಮುಂದಿನ ವ್ಯಾಸಂಗಕ್ಕೆ ಅವಶ್ಯವಿರುವ ಕಲಿಕಾ ಸಾಮಗ್ರಿಗಳನ್ನು ನೀಡಿ ಪುರಸ್ಕರಿಸಿದರು. ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದ ಅವರು ಉತ್ತಮ ವಿದ್ಯಾಭ್ಯಾಸವನ್ನು ಹೊಂದಲು ಹಲವಾರು ಅವಕಾಶಗಳಿವೆ ಜೀವನದಲ್ಲಿ ಒಳ್ಳೆಯ ಉದ್ದೇಶಗಳನ್ನಿಟ್ಟುಕೊಂಡು ಉತ್ತಮ ವಿದ್ಯಾಭ್ಯಾಸ ಹೊಂದಿ ಉತ್ತಮ ಪ್ರಜೆಯಾಗಲು ಪ್ರಯತ್ನಿಸಿ ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿದ್ಯುತ್ ಇಲಾಖೆಯ ನಿವೃತ್ತ ಅಧಿಕಾರಿ ಆರ್. ಟಿ. ಮಿರಾಶಿ ಮಾತನಾಡಿ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದ ಜೊತೆಗೆ ಸಂಘಟನಾ ಶಕ್ತಿಯನ್ನು ಬೆಳೆಸಿಕೊಳ್ಳಲು ಕರೆ ನೀಡಿದರು. ವೇದಿಕೆಯಲ್ಲಿ ಉಪಸ್ಥಿತರಿದ್ದ ಮಹಾಂತೇಶ ರೇವಡಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

    ಈ ಸಂದರ್ಭದಲ್ಲಿ ಸಮಾಜ ವಿಜ್ಞಾನ, ಹಿಂದಿ ಹಾಗೂ ಕನ್ನಡ ವಿಷಯಗಳಲ್ಲಿ 100ಕ್ಕೆ 100 ಅಂಕ ಪಡೆದ ವಿದ್ಯಾರ್ಥಿಗಳಿಗೆ ಶಿಕ್ಷಕರಾದ ನಾರಾಯಣ ವಿ ನಾಯಕ, ಶ್ವೇತಾ ಎಲ್ ನಾಯಕ, ಹಾಗೂ ಇತರ ಶಿಕ್ಷಕರು ನಗದು ಬಹುಮಾನ ನೀಡಿ ಪುರಸ್ಕರಿಸಿದರು. ಎಸ್.ಡಿ. ಎಂ.ಸಿ ಅಧ್ಯಕ್ಷ ಕೃಷ್ಣಮೂರ್ತಿ ನಾಯಕ ಹಾಗೂ ಸದಸ್ಯರು ಉಪಸ್ಥಿತರಿದ್ದರು. ಶ್ವೇತಾ ಎಲ್.ನಾಯಕ ವಿಷಯ ಸಂಘಗಳ ಕುರಿತು ವಿವರಿಸಿದರು. ಭಾಸ್ಕರ ಗಾಂವಕರ ಸ್ವಾಗತಿಸಿದರು. ಮಂಜುನಾಥ ಎಲ್ ನಾಯ್ಕ ಪ್ರತಿಜ್ಞಾವಿಧಿ ಬೋಧಿಸಿದರು. ಉದಯ ನಾಯ್ಕ ವಂದಿಸಿದರು. ರೇಷ್ಮಾ ವೈದ್ಯ ಕಾರ್ಯಕ್ರಮ ನಿರ್ವಹಿಸಿದರು.ಮಹಮ್ಮದ ಇಸ್ಮಾಯಿಲ್ ನವಾಬ ಸಹಕರಿಸಿದರು.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top