ನವದೆಹಲಿ: ಎನ್‌ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ದೇಶದ 15ನೇ ರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ. ಯುಪಿಎ ಅಭ್ಯರ್ಥಿ ಯಶವಂತ್ ಸಿನ್ಹಾ ವಿರುದ್ಧ ಭರ್ಜರಿ ಜಯ ದಾಖಲಿಸುವ ಮೂಲಕ ರಾಷ್ಟ್ರಪತಿ ಹುದ್ದೆಗೇರಿದ ಮೊದಲ ಬುಡಕಟ್ಟು ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಮೊದಲು ಸುತ್ತು ಹಾಗೂ 2ನೇ ಸುತ್ತಿನಲ್ಲೂ ಮುನ್ನಡೆ ಕಾಯ್ದುಕೊಂಡಿದ್ದ ದ್ರೌಪದಿ ಮುರ್ಮು ಅಂತಿಮವಾಗಿ ಭಾರೀ ಮುನ್ನಡೆ ಮೂಲಕ ಜಯದಾಖಲಿಸಿದ್ದಾರೆ. ಮುರ್ಮು ಜಯ ದಾಖಲಿಸುತ್ತಿದ್ದಂತೆ ದೇಶದ ವಿವಿಧ ಭಾಗದಲ್ಲಿ ಕಾರ್ಯಕರ್ತರು ಸಂಭ್ರಮಿಸಿದ್ದಾರೆ.
ದೇಶದ 15ನೇ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಆಯ್ಕೆ
