
ಹೊನ್ನಾವರ: ಶರಾವತಿ ಯೋಜನೆಯ ಲಿಂಗನಮಕ್ಕಿ ಜಲಾಶಯಕ್ಕೆ ಹೇರಳ ಪ್ರಮಾಣದ ನೀರು ಹರಿದು ಬರುತ್ತಿರುವುದರಿಂದ ಜು.29ರ ಬೆಳಿಗ್ಗೆ 8 ಗಂಟೆಗೆ 1806.20 ಮೀಟರ್ ನೀರು ತುಂಬಿ ಭರ್ತಿಯಾಗಿದೆ.
ಒಳ ಹರಿವಿನ ಪ್ರಮಾಣ ಸುಮಾರು 18,552 ಕ್ಯೂಸೆಕ್ಸ್‍ಗಳಿದ್ದು, ನೀರಿನ ಹರಿವು ಒಳ ಮುಂದುವರಿದರೆ ಆಣೆಕಟ್ಟಿನ ಸುರಕ್ಷತೆ ದೃಷ್ಟಿಯಿಂದ ಹೆಚ್ಚುವರಿ ನೀರನ್ನು ಯಾವುದೇ ಸಮಯದಲ್ಲಿ ಹೊರ ಬಿಡಲಾಗುವುದು. ಲಿಂಗನಮಕ್ಕಿ ಆಣೆಕಟ್ಟೆಯ ಕೆಳಭಾಗದಲ್ಲಿ ದೋಣಿ ಸಂಚಾರ, ಮೀನುಗಾರಿಗೆ ಮತ್ತು ಇತರೆ ಚಟುವಟಿಕೆಗಳನ್ನು ನಡೆಸಬಾರದರು ಹಾಗೂ ಆಣೆಕಟ್ಟು ಕೆಳದಂಡೆಯಲ್ಲಿ ಹಾಗೂ ನದಿಯ ನಡದಲ್ಲಿ ವಾಸಿಗಳು ಸುರಕ್ಷಿತ ಪ್ರದೇಶಕ್ಕೆ ತೆರಳುವಂತೆ ಲಿಂಗನಮಕ್ಕಿ ಜಲಾಶಯದ ಕಾರ್ಯನಿರ್ವಾಹಕ ಇಂಜೀನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.