• Slide
    Slide
    Slide
    previous arrow
    next arrow
  • ಮೊಗಳ್ಳಿಯ ಗ್ರಾಮಕ್ಕೆ ಬಿ.ಕೆ.ಹರಿಪ್ರಸಾದ್ ಭೇಟಿ: ನೆರೆ ಸಂತ್ರಸ್ತರಿಗೆ ಶಾಶ್ವತ ಪರಿಹಾರ ಒದಗಿಸುವ ಭರವಸೆ

    300x250 AD

    ಶಿರಸಿ; ನೆರೆ ಹಾವಳಿಯಿಂದ ತೊಂದರೆಗೊಳಗಾದ ತಾಲೂಕಿನ ಮೊಗಳ್ಳಿಯ ಗ್ರಾಮಕ್ಕೆ ಜು.22 ರಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್ ಭೇಟಿ ನೀಡಿ ಗ್ರಾಮಸ್ಥರೊಂದಿಗೆ ಚರ್ಚೆ ನಡೆಸಿ ಅಲ್ಲಿನ ಜನರ ಸಮಸ್ಯೆಯನ್ನು ತಿಳಿದುಕೊಂಡು ಅವರೊಂದಿಗೆ ಮಾತನಾಡಿದರು. ಗ್ರಾಮದಲ್ಲಿರುವ 150 ಕುಟುಂಬಕ್ಕೆ ಶಾಶ್ವತ ಪರಿಹಾರ ಒದಗಿಸಲು ಪ್ರಯತ್ನಿಸಲಾಗುವುದು. ಅದಕ್ಕೆ ಸೂಕ್ತವಾದ ಜಾಗವನ್ನು ಗುರುತಿಸಿ ಅಲ್ಲಿ ವಾಸ್ತವ್ಯಕ್ಕೆ ಅನುಕೂಲ ಮಾಡಿಕೊಡಲು ಪ್ರಯತ್ನಿಸುವುದಾಗಿ ಹೇಳಿದರು.

    ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ನಾಯ್ಕ, ಬನವಾಸಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಎಫ.ನಾಯ್ಕ, ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ಬಸವರಾಜ ದೊಡ್ಮನಿ, ಮಾಜಿ ತಾಲೂಕು ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಶ್ರೀಲತಾ ಶಿವಾಜಿ ಕಾಳೇರಮನಿ, ಮುಖಂಡರಾದ ಕಿರಣ್ ನಾಯ್ಕ ಭಾಶಿ, ಕನ್ನಪ್ಪ ಮೊಗಳ್ಳಿ, ಬಿ.ಶಿವಾಜಿ ಬನವಾಸಿ,ರವಿ ನಾಯ್ಕ ಮರಗುಂಡಿ. ಮುಂತಾದವರು ಉಪಸ್ಥಿತರಿದ್ದರು.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top