• Slide
  Slide
  Slide
  previous arrow
  next arrow
 • ಬದಲಾವಣೆಗೆ ಒಗ್ಗಿಕೊಂಡರೆ ಮಾತ್ರ ವೃತ್ತಿಯಲ್ಲಿ ಯಶಸ್ವಿ: ಕಿರಣ್‌ಕುಮಾರ್

  300x250 AD

  ಹಳಿಯಾಳ: ಬದಲಾವಣೆಗೆ ಒಗ್ಗಿಕೊಂಡರೆ ಮಾತ್ರ ವೃತ್ತಿಯಲ್ಲಿ ಯಶಸ್ವಿಯಾಗಲು ಸಾಧ್ಯವಿದೆ. ಸಿಕ್ಕ ಅವಕಾಶಗಳನ್ನು ಸದ್ಬಳಕೆ ಮಾಡಿಕೊಂಡು ಮುಂದಿನ ಭವಿಷ್ಯ ಉಜ್ವಲವಾಗಿಸಿಕೊಳ್ಳಿ ಎಂದು ಜಿಟಿಟಿಸಿ ಪ್ರಾಂಶುಪಾಲ ಕಿರಣ್‌ಕುಮಾರ್ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

  ದೇಶಪಾಂಡೆ ಖಾಸಗಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಯಶಸ್ವಿಯಾಗಿ ತರಬೇತಿ ಮುಗಿಸಿದ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ಹಾಗೂ ವಾರ್ಷಿಕ ಕ್ರೀಡಾಕೂಟದ ವಿಜೇತರಿಗೆ ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

  ವಿ.ಆರ್.ಡಿ.ಎಂ. ಟ್ರಸ್ಟ್ನ ಆಡಳಿತಾಧಿಕಾರಿ ಪ್ರಕಾಶ್ ಪ್ರಭು ಅಧ್ಯಕ್ಷತೆ ವಹಿಸಿದ್ದರು. ಡಿಪಿಐಟಿಐ ಪ್ರಾಚಾರ್ಯ ದಿನೇಶ್ ಆರ್.ನಾಯ್ಕ್, ಪ್ರಸಕ್ತ ಹಾಗೂ ಹಿಂದಿನ ಸಾಲಿನಲ್ಲಿ ಸಂಸ್ಥೆಯು ಕೈಗೊಂಡ ಕಾರ್ಯಚಟುವಟಿಕೆಗಳು ಹಾಗೂ ವಿಶೇಷ ಸಾಧನೆಗೈದ ವಿದ್ಯಾರ್ಥಿಗಳ ಮಾಹಿತಿಯನ್ನು ಒದಗಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.

  300x250 AD

  ಸಂಸ್ಥೆಯಲ್ಲಿ ತರಬೇತಿ ಪಡೆದು ಸ್ವ ಉದ್ಯಮವನ್ನು ಪ್ರಾರಂಭಿಸಿ ಸಾಧನೆಗೈದ ವಿದ್ಯಾರ್ಥಿಗಳಾದ ಹಳಿಯಾಳದ ಮಂಗೇಶ್ ಹುನ್ಸವಾಡಕರ್ ಹಾಗೂ ಮಂಜುನಾಥ್ ಪವಾರ್ ಅವರನ್ನು ಸನ್ಮಾನಿಸಲಾಯಿತು. ವಾರ್ಷಿಕ ಕ್ರೀಡಾ ಚಟುವಟಿಕೆಗಳಲ್ಲಿ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ವಿಜೇತರಾದ ಎಲ್ಲ ವಿದ್ಯಾರ್ಥಿ,ವಿದ್ಯಾರ್ಥಿನಿಯರಿಗೆ ಬಹುಮಾನ ವಿತರಿಸಲಾಯಿತು.

  ಡಿ.ಡಿ.ನಾಯ್ಕ ಕಾರ್ಯಕ್ರಮವನ್ನು ನಿರ್ವಹಿಸಿದರು. ರವೀಂದ್ರ ಡುಮಗೋಳಕರ್ ವಂದಿಸಿದರು. ಕಾರ್ಯಕ್ರಮದಲ್ಲಿ ಜಿಟಿಟಿಸಿ ನಿವೃತ್ತ ಪ್ರಾಚಾರ್ಯ ವಿ.ಎಂ.ಜೋಷಿ, ತರಬೇತಿ ಅಧಿಕಾರಿ ನಂದಕುಮಾರ್ ತೋರಸ್ಕರ, ಸಾಂಸ್ಕೃತಿಕ ವಿಭಾಗದ ಪ್ರವೀಣ್ ಕುಲಕರ್ಣಿ, ಬಸವರಾಜ್ ಬಡಿಗೇರ ಉಪಸ್ಥಿತರಿದ್ದರು.

  Share This
  300x250 AD
  300x250 AD
  300x250 AD
  Leaderboard Ad
  Back to top