ಹೊನ್ನಾವರ: ಸ್ಥಳೀಯ ಸಂಸ್ಥೆ, ಜನಪ್ರತಿನಿಧಿಗಳ ಸಮಸ್ಯೆ ಬಗ್ಗೆ ತಿಳಿಯುವ ನಿಟ್ಟಿನಲ್ಲಿ ವಿಧಾನ ಪರಿಷತ್ ಸದಸ್ಯ ಗಣಪತಿ ಉಳ್ವೇಕರ್ ತಾಲೂಕಿನ ಪಂಚಾಯತ್‌ಗಳಿಗೆ ಶುಕ್ರವಾರ ಭೇಟಿ ನೀಡಿದರು.
ತಾಲ್ಲೂಕಿನ ಚಿಕ್ಕನಕೋಡ್, ಹೆರಗಂಡಿ ಗ್ರಾಮ ಪಂಚಾಯತ್‌ಗೆ ಭೇಟಿ ನೀಡಿದ ಗಣಪತಿ ಉಳ್ವೇಕರ್ ಚುನಾಯಿತ ಪ್ರತಿನಿಧಿಗಳು ಜೊತೆಗೆ ಸಭೆ ನಡೆಸಿ ಪಂಚಾಯತ್ ಮಟ್ಟದಲ್ಲಿ ಪ್ರತಿನಿಧಿಗಳು ಎದುರಿಸುತ್ತಿರುವ ಸಮಸ್ಯೆಗಳನ್ನ ಆಲಿಸಿದರು. ಇದಾದ ನಂತರ ಭಟ್ಕಳದಲ್ಲಿ ಸ್ಥಳೀಯ ಬಿಜೆಪಿ ಕಾರ್ಯಕರ್ತರ ಹಾಗೂ ಬಿಜೆಪಿ ಬೆಂಬಲಿತರ ಗ್ರಾಮ ಪಂಚಾಯತ ಸದಸ್ಯರ ಜೊತೆಗೆ ಕೆಲವು ಕಾಲ ಚರ್ಚೆ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ವಿಧಾನ ಪರಿಷತ್ ಚುನಾವಣೆಯ ವೇಳೆ ನನ್ನ ಗೆಲುವಿನ ಸಹಕರಿಸಿದ ಎಲ್ಲಾ ಪಕ್ಷದ ಮುಖಂಡರಿಗೆ ಹಾಗೂ ಪಕ್ಷದ ಕಾರ್ಯಕರ್ತರಿಗೆ ಹಾಗೂ ಚುನಾಯಿತ ಜನಪ್ರತಿನಿಧಿಗಳಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು ಸಲ್ಲಿಸುತ್ತೇನೆ. ಈ ನನ್ನ 6 ವರ್ಷದ ಅವಧಿಯಲ್ಲಿ ಉತ್ತರ ಕನ್ನಡ ಜಿಲ್ಲೆಯನ್ನು ಇನ್ನಷ್ಟು ಅಭಿವೃದ್ಧಿ ಮಾಡಲು ಸದಾ ನಿಮ್ಮ ಜೊತೆಗೆ ಇದ್ದೇನೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಭಟ್ಕಳ ಬಿಜೆಪಿ ಮಂಡಳ ಅಧ್ಯಕ್ಷ ಸುಬ್ರಾಯ ದೇವಾಡಿಗ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗೋವಿಂದ ನಾಯ್ಕ, ಜಿಲ್ಲಾ ಕಾರ್ಯದರ್ಶಿ ಶಿವಾನಿ ಶಾಂತಾರಾಮ್, ಯುವ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂತೋಷ ನಾಯ್ಕ, ಮಾಜಿ ಕ್ಷೇತ್ರಾಧ್ಯಕ್ಷ ದಿನೇಶ್ ನಾಯ್ಕ ಭಟ್ಕಳ ಹಾಗೂ ಹೊನ್ನಾವರ ಶಕ್ತಿ ಕೇಂದ್ರ ಅಧ್ಯಕ್ಷರು, ಬೂತ್ ಮಟ್ಟದ ಕಾರ್ಯಕರ್ತರು ಸೇರಿದಂತೆ ಹಲವರು ಉಪಸ್ಥಿತರಿದ್ದರು.