Slide
Slide
Slide
previous arrow
next arrow

ಸೂರ್ಯನಾರಾಯಣ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಸಂಸತ್ ಉದ್ಘಾಟನೆ

300x250 AD

ಶಿರಸಿ: ತಾಲೂಕಿನ ಬಿಸಲಕೊಪ್ಪದ ಸೂರ್ಯನಾರಾಯಣ ಪ್ರೌಢಶಾಲೆಯಲ್ಲಿ ಇತ್ತೀಚೆಗೆ ವಿದ್ಯಾರ್ಥಿ ಸಂಸತ್ ಉದ್ಘಾಟನೆ ನಡೆಯಿತು. ಶಾಲಾ ಮುಖ್ಯೋಪಾಧ್ಯಾಯ ಗಣೇಶ ಭಟ್ಟ  ವಾನಳ್ಳಿ ಕಾರ್ಯಚಟುವಟಿಕೆ ಉದ್ಘಾಟಿಸಿ ಮಾತನಾಡುತ್ತ ,  ವಿದ್ಯಾರ್ಥಿಗಳು ಪ್ರಜಾಪ್ರಭುತ್ವ   ಹಾಗೂ ನಮ್ಮ ಸಂವಿಧಾನ ಮಹತ್ವ ಅರಿತು ಸಾಗಬೇಕು ಅದಕ್ಕಾಗಿ ಈ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು. ವಿದ್ಯಾರ್ಥಿಗಳು   ಮತದಾನದ ಮೂಲಕ ತಮ್ಮ ಪ್ರತಿನಿಧಿಗಳನ್ನು ಆರಿಸಿದ್ದು ವಿಶೇಷವಾಗಿತ್ತು.ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳಿಂದ   ರಚಿತವಾದ ” ರವಿ ರಶ್ಮಿ “ಹಸ್ತ ಪ್ರತಿ   ಬಿಡುಗಡೆ ಮಾಡಿದ್ದಲ್ಲದೆ  ರಾಷ್ಟ್ರಪತಿ ಚುನಾವಣೆ ಕುರಿತು ಕ್ವಿಜ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಮತದಾರರ ಸಾಕ್ಷರತಾ ಸಂಘದ ಅಡಿಯಲ್ಲಿ ಕಾರ್ಯ ಕ್ರಮ ಆಯೋಜನೆಗೊಂಡಿತ್ತು. ಶಿಕ್ಷಕ ಲೋಕನಾಥ ಹರಿಕಂತ್ರ ಸ್ವಾಗತಿಸಿದರೆ ಶಿಕ್ಷಕ ಪ್ರಸಾದ್ ಹೆಗಡೆ ವಂದಿಸಿದರು.ವಿದ್ಯಾರ್ಥಿಗಳಾದ ನಂದಿನಿ  , ಆದಿತ್ಯ ನಿರ್ವಹಿಸಿದರು.

300x250 AD
Share This
300x250 AD
300x250 AD
300x250 AD
Back to top