• first
    second
    third
    previous arrow
    next arrow
  • Trending Now

    ಧಾರವಾಡ ಹಾಲು ಒಕ್ಕೂಟಕ್ಕೆ ಶಂಕರ ಮುಗದ ಅವಿರೋಧ ಆಯ್ಕೆ

    300x250 AD

    ಶಿರಸಿ: ಧಾರವಾಡ ಹಾಲು ಒಕ್ಕೂಟದ ಅಧ್ಯಕ್ಷ ಸ್ಥಾನಕ್ಕೆ ಶುಕ್ರವಾರ ನಡೆದ ಚುನಾವಣೆಯಲ್ಲಿ ಒಕ್ಕೂಟದ ಅಧ್ಯಕ್ಷರಾಗಿ ಹಿರಿಯ ಸಹಕಾರಿ ಮುಖಂಡ ಶಂಕರ ಮುಗದ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
    ಹಾವೇರಿ, ಧಾರವಾಡ, ಗದಗ ಮತ್ತು ಉತ್ತರ ಕನ್ನಡ ಜಿಲ್ಲೆಗಳ ವ್ಯಾಪ್ತಿ ಹೊಂದಿರುವ ಧಾರವಾಡ ಹಾಲು ಒಕ್ಕೂಟದ ಅಧ್ಯಕ್ಷರಾಗಿದ್ದ ಬಸವರಾಜ ಅರಬಗೊಂಡ ವಿರುದ್ಧ ಒಕ್ಕೂಟದ ನಿರ್ದೇಶಕರು ಕಳೆದ ಜು.2ರಂದು ಮಂಡಿಸಿದ್ದ ಅವಿಶ್ವಾಸ ಗೊತ್ತುವಳಿಗೆ ಜಯ ಲಭಿಸಿತ್ತು.
    ಹೀಗಾಗಿ ಅಧ್ಯಕ್ಷ ಸ್ಥಾನಕ್ಕೆ ಶುಕ್ರವಾರ ಚುನಾವಣೆ ನಡೆಯಿತು. ಈಗ ಆಯ್ಕೆಯಾಗುವ ಮೂಲಕ ಶಂಕರ ಮುಗದ ಅವರು ಎರಡನೇ ಬಾರಿಗೆ ಅಧ್ಯಕ್ಷ ಸ್ಥಾನಕ್ಕೇರಿದಂತಾಗಿದೆ. ಒಂದೇ ನಾಮಪತ್ರ ಸಲ್ಲಿಕೆಯಾದ ಕಾರಣ ಚುನಾವಣಾಧಿಕಾರಿ ಆರ್.ಟಿ.ಪೆÇೀಳ ಅವರು ಶಂಕರ ಮುಗದ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಘೋಷಿಸಿದರು.
    ಅವಿರೋಧವಾಗಿ ಆಯ್ಕೆಯಾದ ಶಂಕರ ಮುಗದ ಅವರನ್ನು ಶಾಸಕ ಅಮೃತ ದೇಸಾಯಿ, ಮುಖಂಡರಾದ ಅಡಿವೆಪ್ಪ ಹೊನ್ನಪ್ಪನವರ, ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೆಶಿನ್ಮನೆ ಮತ್ತಿತರರು ಅಭಿನಂದಿಸಿದರು.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top