ಶಿರಸಿ; ಎಂಇಎಸ್ ಎಂಎಂ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯ ಹಾಗೂ ತೋಟಗಾರ್ಸ್ ಕೋ-ಒಪರೇಟಿವ್ ಸೇಲ್ ಸೊಸೈಟಿ ಲಿ.ಶಿರಸಿ ಇವರುಗಳ ಸಹಯೋಗದೊಂದಿಗೆ ಕಾಲೇಜಿನ ಮೋಟಿನ್ಸರ ಸಬಾಭವನದಲ್ಲಿ ದಿ.ಶ್ರೀಪಾದ ಹೆಗಡೆ ಕಡವೆ ಸ್ಮರಣಾರ್ಥ ದತ್ತಿನಿಧಿ ಉಪನ್ಯಾಸ ಹಾಗೂ ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣೆ ಕಾರ್ಯಕ್ರಮವನ್ನು ಜು.26 ಮಂಗಳವಾರ ಬೆಳಿಗ್ಗೆ 11 ಗಂಟೆಗೆ ಹಮ್ಮಿಕೊಳ್ಳಲಾಗಿದೆ.
ಎಂಇಎಸ್ ಅಧ್ಯಕ್ಷ ಜಿ.ಎಂ.ಹೆಗಡೆ ಮುಳಖಂಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ನಿವೃತ್ತ ಪ್ರಾಚಾರ್ಯ ಪ್ರೊ ಕೆ.ಎನ್. ಹೊಸಮನಿ, ಉಪನ್ಯಾಸಕರಾಗಿ ಸಹಕಾರಿ ಧುರೀಣ ಆರ್.ಎನ್.ಹೆಗಡೆ ಗೊರ್ಸಗದ್ದೆ ಆಗಮಿಸಲಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲ ಡಾ.ಟಿ.ಎಸ್ ಹಳೆಮನೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.