ಬೆಂಗಳೂರು: ಜೂನ್ ತಿಂಗಳಲ್ಲಿ ನಡೆಸಲಾಗಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯ (ಸಿಇಟಿ) ಫಲಿತಾಂಶವನ್ನು ಜುಲೈ 30ರಂದು ಪ್ರಕಟಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.
ಸೋಮವಾರ ಮಾಹಿತಿ ನೀಡಿರುವ ಅವರು, ವಿವಿಧ ವೃತ್ತಿಪರ ಕೋರ್ಸುಗಳಿಗೆ ಪ್ರವೇಶ ಪಡೆದುಕೊಳ್ಳಲು ನಡೆದಿದ್ದ ಸಿಇಟಿ ಪರೀಕ್ಷೆಯನ್ನು ಈ ಬಾರಿ ಬಿಗಿ ಭದ್ರತೆ ನಡುವೆ ಕಟ್ಟುನಿಟ್ಟಾಗಿ ನಡೆಸಲಾಗಿತ್ತು’ ಎಂದರು.
ಸಿಇಟಿ ಪರೀಕ್ಷೆ ನಡೆಸುವಾಗ ಸಿಬಿಎಸ್ ಸಿ ಮತ್ತು ಐಸಿಎಸ್ಇ ಪಠ್ಯಕ್ರಮದಲ್ಲಿ 12ನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿಗಳಿಗೂ ಅವಕಾಶ ಕೊಡಲಾಗಿತ್ತು. ಈಗ ಅವರ ಫಲಿತಾಂಶ ಬಂದಿದ್ದು, ಸಿಇಟಿ ಬರೆದಿದ್ದ ಈ ವಿದ್ಯಾರ್ಥಿಗಳು, ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್ ಸೈಟ್ ನಲ್ಲಿ ತಮ್ಮ ಅಂಕಗಳನ್ನು ಜುಲೈ 26 ಸಂಜೆಯೊಳಗೆ ಅಪ್ಲೋಡ್ ಮಾಡಬೇಕು ಎಂದು ಅವರು ಹೇಳಿದ್ದಾರೆ.