Slide
Slide
Slide
previous arrow
next arrow

ಖಾರ್ಲ್ಯಾಂಡ್ ಕಳಪೆ ಕಾಮಗಾರಿ:ಗದ್ದೆಗಳಿಗೆ ಉಪ್ಪು ನೀರು ನುಗ್ಗಿ ಬೆಳೆ ಹಾನಿ

300x250 AD

ಹೊನ್ನಾವರ: ತಾಲೂಕಿನ ಹಳದಿಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಿರಬೈಲ್ ಗೊಳಿಬೆಟ್ಟ ಮಜರೆಯಲ್ಲಿ ಖಾರ್ಲ್ಯಾಂಡ್ ಕಳಪೆ ಕಾಮಗಾರಿಯಿಂದಾಗಿ ಜನಸಂಚಾರಕ್ಕೆ ಕಷ್ಟವಾಗಿದ್ದು, ಗದ್ದೆಗಳಿಗೆ ಉಪ್ಪು ನೀರು ನುಗ್ಗಿ ಬೆಳೆ ಹಾನಿಯಾಗುತ್ತಿದೆ. ಕಳಪೆ ಕಾಮಗಾರಿಗೆ ಕಾರಣರಾದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಗ್ರಾಮ ಪಂಚಾಯತಿ ಅಧ್ಯಕ್ಷ ಅಜಿತ್ ನಾಯ್ಕ ಅವರಿಗೆ ಸ್ಥಳೀಯರು ಮನವಿ ಸಲ್ಲಿಸಿ ಒತ್ತಾಯಿಸಿದ್ದಾರೆ.

ಬಡಗಣಿ ನದಿಗೆ ಬಲದಂಡೆಗೆ ಖಾರ್ಲ್ಯಾಂಡ್‌ಗಾಗಿ ಚಿಕ್ಕ ನೀರಾವರಿ ಇಲಾಖೆಯಿಂದ 50 ಲಕ್ಷ ರೂ. ಮಂಜೂರಿಯಾಗಿ ಕಳೆದ ಏಪ್ರಿಲ್ ಹಾಗೂ ಮೇ ತಿಂಗಳಲ್ಲಿ ಕಾಮಗಾರಿ ನಡೆದಿತ್ತು. ಈ ಕಾಮಗಾರಿ ಸಂಪೂರ್ಣವಾಗಿ ಕಳಪೆಯಾಗಿದೆ. ಕಾಮಗಾರಿ ಪೂರ್ಣಗೊಂಡು ಎರಡು ತಿಂಗಳು ಕಳೆಯುವುದರೊಳಗೆ ರಸ್ತೆ ಹಾಗೂ ಪಿಚ್ಚಿಂಗ್ ಸಂಪೂರ್ಣವಾಗಿ ಕುಸಿದು ನದಿಯ ಪಾಲಾಗಿದೆ. 100ಕ್ಕೂ ಅಧಿಕ ಕುಟುಂಬಗಳು ಈ ಪ್ರದೇಶದಲ್ಲಿ ವಾಸಿಸುತ್ತಿದ್ದು, ವಯೋವೃದ್ಧರು ಹಾಗೂ ಶಾಲಾ ಮಕ್ಕಳು ಈ ದಾರಿಯಿಂದ ನಡೆಯಲು ಭಯಪಡುವಂತಾಗಿದೆ. ಕಾಮಗಾರಿ ಮಾಡುವಾಗ ಸ್ಥಳೀಯ ಪಂಚಾಯತ್ ಗಮನಕ್ಕೂ ತರದೆ ತಮಗೆ ಇಷ್ಟ ಬಂದ ರೀತಿಯಲ್ಲಿ ಕಾಮಗಾರಿ ಮುಗಿಸಿದ್ದಾರೆ ಎಂದು ದೂರಿದ್ದಾರೆ.

300x250 AD

ಕಳಪೆ ಕಾಮಗಾರಿಯಿಂದಾಗಿ ತುರ್ತು ಪರಿಸ್ಥಿತಿಯಲ್ಲಿ ಒಂದು ವಾಹನ ಓಡಾಟಕ್ಕೂ ಕಷ್ಟವಾಗಿದೆ. ಸ್ಥಳಕ್ಕೆ ಭಟ್ಕಳ ಉಪವಿಭಾಗಾಧಿಕಾರಿ ಮಮತಾದೇವಿ ಹಾಗೂ ತಹಶೀಲ್ದಾರ್ ನಾಗರಾಜ್ ನಾಯ್ಕಡ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆದರೆ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ. ಕಳಪೆ ಕಾಮಗಾರಿ ನಡೆಸಿದವರ ವಿರುದ್ಧ ಕ್ರಮ ಕೈಗೊಂಡು ಕಾಮಗಾರಿಯನ್ನು ಸರಿಯಾದ ರೀತಿಯಲ್ಲಿ ಸರಿಪಡಿಸದೇ ಹೋದಲ್ಲಿ ತಹಶೀಲ್ದಾರ್ ಕಚೇರಿ ಎದುರು ಧರಣಿ ನಡೆಸುತ್ತೇವೆ ಎಂದು ಮನವಿಯಲ್ಲಿ ಎಚ್ಚರಿಕೆ ನೀಡಿದ್ದಾರೆ.

Share This
300x250 AD
300x250 AD
300x250 AD
Back to top