• Slide
  Slide
  Slide
  previous arrow
  next arrow
 • ಅಂಬ್ಯುಲೆನ್ಸ್ ಅಪಘಾತದಲ್ಲಿ ಮೃತಪಟ್ಟವರ ಮನೆಗೆ ಶಾಸಕ, ಸಚಿವರ ಭೇಟಿ

  300x250 AD

  ಹೊನ್ನಾವರ: ಇತ್ತೀಚಿಗೆ ಶಿರೂರು ಟೋಲ್‌ಗೇಟ್ ಬಳಿ ಅಂಬ್ಯುಲೆನ್ಸ್ ಅಪಘಾತದಲ್ಲಿ ಮೃತಪಟ್ಟ ಹಾಡಗೇರಿ ಮತ್ತು ಬಳ್ಕೂರು ಮೂಲದವರ ಕುಟುಂಬದ ಸದಸ್ಯರ ಭೇಟಿಯಾದ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ, ಅವರಿಗೆ ಸಾಂತ್ವನ ಹೇಳಿ, ಮಕ್ಕಳೊಂದಿಗೆ ಮಾತುಕತೆ ನಡೆಸಿ ಧೈರ್ಯ ತುಂಬಿದರು.

  ಇದು ವಿಶೇಷ ಪ್ರಕರಣ ಎಂದು ಪರಿಗಣಿಸಿ ಶಾಸಕರೊಂದಿಗೆ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ವಿಶೇಷ ಪರಿಹಾರಧನ ನೀಡುವಂತೆ ಒತ್ತಾಯಿಸಲಾಗುವುದು ಎಂದು ಸಚಿವರು ಈ ವೇಳೆ ಭರವಸೆ ನೀಡಿದರು. ಇದೇ ಸಂದರ್ಭದಲ್ಲಿ ಮರಣ ದಾಖಲೆ ಸೇರಿದಂತೆ ವಿವಿಧ ದಾಖಲಾತಿಗಳ ಸಮಸ್ಯೆಯ ಬಗ್ಗೆ ಸ್ಥಳೀಯರು ಗಮನಕ್ಕೆ ತಂದಾಗ, ಸಚಿವರೊಂದಿಗಿದ್ದ ಶಾಸಕ ಸುನೀಲ ನಾಯ್ಕ ಅಧಿಕಾರಿಗಳೊಂದಿಗೆ ಮಾತನಾಡಿ ಸಂಬಂಧಿಸಿದ ಎಲ್ಲಾ ದಾಖಲೆಗಳನ್ನು ಒದಗಿಸುವ ಭರವಸೆ ನೀಡಿದರು.

  300x250 AD

  ಈ ವೇಳೆ ಉಪವಿಭಾಗಾಧಿಕಾರಿ ಮಮತಾದೇವಿ ಜಿ.ಎಸ್., ತಹಶೀಲ್ದಾರ ನಾಗರಾಜ ನಾಯ್ಕಡ್, ಸಿಪಿಐ ಶ್ರೀಧರ ಎಸ್.ಆರ್., ಗ್ರಾ.ಪಂ. ಅಧ್ಯಕ್ಷ ಮಂಜುನಾಥ ನಾಯ್ಕ, ವಿಘ್ನೇಶ್ವರ ಹೆಗಡೆ, ಸ್ಥಳೀಯರಾದ, ಆರ್.ಪಿ.ನಾಯ್ಕ, ಹರಿಯಪ್ಪ ನಾಯ್ಕ, ಕಮಲಾಕರ ಆಚಾರಿ ಮತ್ತಿತರರು ಇದ್ದರು.

  Share This
  300x250 AD
  300x250 AD
  300x250 AD
  Leaderboard Ad
  Back to top