Slide
Slide
Slide
previous arrow
next arrow

ರಾಮಕೃಷ್ಣ ಹೆಗಡೆ ವೃತ್ತದಲ್ಲಿ ಕಾರ್ಗಿಲ್ ವಿಜಯ ದಿವಸ ಕಾರ್ಯಕ್ರಮ

300x250 AD

ಸಿದ್ದಾಪುರ: ಪಟ್ಟಣದ ಶ್ರೀ ರಾಮಕೃಷ್ಣ ಹೆಗಡೆ ವೃತ್ತದಲ್ಲಿ ಮಂಗಳವಾರ ಸಂಜೆ ನಿವೃತ್ತ ಸೈನಿಕರ ಸಂಘ ಹಾಗೂ ಗೆಳೆಯರ ಬಳಗದ ಆಶ್ರಯದಲ್ಲಿ ಕಾರ್ಗಿಲ್ ವಿಜಯ ದಿವಸ ಕಾರ್ಯಕ್ರಮ ನಡೆಸಲಾಯಿತು. ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ವೀರ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪಂಜಿನ ಮೆರವಣಿಗೆ ನಡೆಸಲಾಯಿತು. ನಂತರ ಭಾರತ ಮಾತೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ನಡೆಸಿ ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮ ಮುಕ್ತಾಯಗೊಳಿಸಲಾಯಿತು. ನಿವೃತ್ತ ಸೈನಿಕರ ಸಂಘದ ಪದಾಧಿಕಾರಿಗಳು, ಗೆಳೆಯರ ಬಳಗ ಹಾಗೂ ವಿವಿಧ ಸಂಘಟನೆಯ ಪ್ರಮುಖರು, ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

300x250 AD
Share This
300x250 AD
300x250 AD
300x250 AD
Back to top