• Slide
    Slide
    Slide
    previous arrow
    next arrow
  • ‘ಹರ್ ಘರ್ ತಿರಂಗಾ’ ಅಭಿಯಾನ ಯಶಸ್ವಿಗೊಳಿಸಲು ಜಿಲ್ಲಾಧಿಕಾರಿ ಕರೆ

    300x250 AD

    ಕಾರವಾರ: 75ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ದೇಶದದಲ್ಲಿ ‘ಹರ್ ಘರ್ ತಿರಂಗಾ’ ಅಭಿಯಾನವನ್ನು ಆಗಸ್ಟ್ 13ರಿಂದ 15ರವರೆಗೆ ಹಮ್ಮಿಕೊಳ್ಳಲಾಗುತ್ತಿದ್ದು, ಈ ದಿನಗಳಂದು ಜಿಲ್ಲೆಯಲ್ಲಿರುವ ಎಲ್ಲಾ ಮನೆಗಳು, ಸರ್ಕಾರಿ ಕಚೇರಿ, ಸಂಘ- ಸಂಸ್ಥೆಗಳ ಕಟ್ಟಡಗಳ ಮೇಲೆ ರಾಷ್ಟ್ರಧ್ವಜವನ್ನು ಹಾರಿಸಲು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅಧಿಕಾರಿಗಳಿಗೆ ಸೂಚಿಸಿದರು.

    ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಸ್ವಾತಂತ್ರ್ಯೋತ್ಸವ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕಳೆದ 2 ವರ್ಷದಲ್ಲಿ ಕೋವಿಡ್ ಕಾರಣಗಳಿಂದ ಸರಳವಾಗಿ ಸ್ವಾತಂತ್ರ್ಯೋತ್ಸವವನ್ನು ಆಚರಣೆ ಮಾಡಲಾಗಿತ್ತು. ಆದರೆ ಈ ವರ್ಷ 75ನೇ ಸ್ವಾತಂತ್ರ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಬೇಕು ಹಾಗೂ ಜಿಲ್ಲೆಯ ಸರಕಾರಿ, ಅರೆ ಸರಕಾರಿ ಶಾಲಾ- ಕಾಲೇಜು ಮತ್ತು ಸ್ಥಳೀಯ ಸಂಸ್ಥೆಯವರು ಅವರವರ ಕಚೇರಿಯಲ್ಲಿ ಧ್ವಜಾರೋಹಣ ನೇರವರಿಸಬೇಕು ಎಂದು ಹೇಳಿದರು.

    ಪೊಲೀಸ್ ಪರೇಡ್ ಮೈದಾನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಿಂದ ಧ್ವಜಾರೋಹಣ ನಡೆಯುವುದರಿಂದ ಹಾಗೂ ಮಳೆಯಿರುವುದರಿಂದ ಶಾಮಿಯಾನ, ಚೇರ್‌ಗಳು, ಉಪಹಾರ ವ್ಯವಸ್ಥೆ, ಎನ್.ಸಿ.ಸಿ, ಗೃಹರಕ್ಷಕ, ಅರಣ್ಯ ಇನ್ನಿತರ ತಂಡಗಳಿಂದ ಕವಾಯತು ಹಾಗೂ ವಿವಿಧ ಶಾಲಾ- ಕಾಲೇಜುಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪಟ್ಟಿ ಮಾಡಿ ಸಿದ್ಧತೆ ಮಾಡಿಕೊಳ್ಳಿ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

    300x250 AD

    ನಗರದ ವಿವಿಧ ವೃತ್ತಗಳಲ್ಲಿ ಹಾಗೂ ಎಲ್ಲಾ ಇಲಾಖಾ ಮುಖ್ಯಸ್ಥರು ತಮ್ಮ ಕಚೇರಿಗಳಲ್ಲಿ 75ನೇ ಸ್ವಾತಂತ್ರ್ಯೋತ್ಸವದ ಪ್ರತೀಕವಾಗಿ ತಳಿರು ತೋರಣಗಳಿಂದ ಸಿಂಗರಿಸಿ, ವಿದ್ಯುತ್ ದೀಪಾಲಂಕಾರ ಮಾಡಬೇಕು ಮತ್ತು ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸ್ವಾತಂತ್ರ್ಯೋತ್ಸವದಲ್ಲಿ ಕಡ್ಡಾಯವಾಗಿ ಪಾಲ್ಗೋಳ್ಳಬೇಕು ಎಂದು ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸೂಚನೆ ನೀಡಿದರು.

    ಸಭೆಯಲ್ಲಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಿಯಾಂಗಾ ಎಮ್., ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಮೊಗವೀರ ಹಾಗೂ ವಿವಿಧ ಇಲಾಖಾ ಅಧಿಕಾರಿಗಳು ಹಾಗೂ ಸಿಬ್ಬಂದಿ ಹಾಜರಿದ್ದರು.

    Share This
    300x250 AD
    300x250 AD
    300x250 AD
    Leaderboard Ad
    Back to top