• first
  second
  third
  previous arrow
  next arrow
 • ಬೈಕ್ ಕದ್ದಿದ್ದ ಅಂತರ್ ಜಿಲ್ಲಾ ಕಳ್ಳ ಅಂದರ್

  300x250 AD

  ಮುಂಡಗೋಡ: ಬೈಕ್ ಕದ್ದಿದ್ದ ಅಂತರ್ ಜಿಲ್ಲಾ ಕಳ್ಳನನ್ನು ಪೊಲೀಸರು ಮಂಗಳವಾರ ಬೈಕ್ ಸಮೇತ ಬಂಧಿಸಿದ್ದಾರೆ.

  ಹಾನಗಲ್ ತಾಲೂಕಿನ ಹುಲಗಿನಕೊಪ್ಪ ಗ್ರಾಮದ ಅನೀಲ ಬಂಡಿವಡ್ಡರ ಬಂಧಿತ ಆರೋಪಿ. ತಾಲೂಕಿನ ಕಾತೂರ ಗ್ರಾಮದಲ್ಲಿ ಜೂ.6ರಂದು ಶಿರಾಜ ಬೊಮ್ಮನಳ್ಳಿ ಎಂಬುವವರ ಮನೆಯ ಮುಂದೆ ನಿಲ್ಲಿಸಿದ್ದ ಬೈಕ್ ಕಳ್ಳತನವಾಗಿತ್ತು. ಈ ಕುರಿತು ಪೊಲೀಸ್ ಠಾಣೆಗೆ ಅವರು ದೂರು ನೀಡಿದ್ದರು. ಪ್ರಕರಣ ಭೇದಿಸಿದ ಪೊಲೀಸರು, ಆರೋಪಿಯನ್ನು ಮಂಗಳವಾರ ಬಂಧಿಸಿ ಬೈಕ್ ವಶಪಡಿಸಿಕೊಂಡಿದ್ದಾರೆ.

  300x250 AD

  ಪಿಐ ಸಿದ್ದಪ್ಪ ಸಿಮಾನಿ, ಪಿಎಸೈಗಳಾದ ಬಸವರಾಜ ಮಬನೂರ, ಎನ್.ಡಿ.ಜಕ್ಕಣ್ಣವರ, ಮಣಿಮಾಲನ ಮೇಸ್ತಿç, ಎಎಸ್‌ಐ ಹಾಗೂ ಸಿಬ್ಬಂದಿಗಳಾದ ಸಲೀಮ, ಕೋಟೇಶ ನಾಗರವಳ್ಳಿ, ಅಣ್ಣಪ್ಪ ಬಡಿಗೇರ, ಬಸವರಾಜ ಲಮಾಣಿ, ವಿವೇಕ ಪಟಗಾರ, ಸಹದೇವ, ಶರತ್ ದೇವಳಿ ಪ್ರಕರಣವನ್ನು ಭೇದಿಸಿ ಆರೋಪಿತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

  Share This
  300x250 AD
  300x250 AD
  300x250 AD
  Back to top