ಯಲ್ಲಾಪುರ: ದೇಶದಲ್ಲಿ ಜನಸಂಖ್ಯೆ ಅಪಾರ ಪ್ರಮಾಣದಲ್ಲಿದೆ. ಅದನ್ನು ಮಾನವ ಸಂಪನ್ಮೂಲವಾಗಿ ಪರಿವರ್ತಿಸಿ, ದೇಶದ ಪ್ರಗತಿಗೆ ಪೂರಕವಾಗುವಂತೆ ಮಾಡುವ ಕಾರ್ಯ ಆಗಬೇಕೆಂದು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಹೇಳಿದರು.
ಪಟ್ಟಣದ ವೈ ಟಿ ಎಸ್ ಎಸ್ ಶಿಕ್ಷಣ ಸಂಸ್ಥೆ ಸಭಾಭವನದಲ್ಲಿ ಜಿಲ್ಲಾಡಳಿತ, ಜಿ.ಪಂ ಉತ್ತರ ಕನ್ನಡ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಆಸ್ಪತ್ರೆ ಮತ್ತು ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ಯಲ್ಲಾಪುರ, ವೈ. ಟಿ. ಎಸ್. ಎಸ್.ನ ಎನ್. ಎಸ್. ಎಸ್. ಘಟಕ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ವಿಧಾನ ಪರಿಷತ್ ಸದಸ್ಯ ಶಾಂತಾರಾಮ ಸಿದ್ದಿ ಮಾತನಾಡಿ, ಜನಸಂಖ್ಯಾ ನಿಯಂತ್ರಣದ ವಿಚಾರದಲ್ಲಿ ಎಲ್ಲರಿಗೂ ಒಂದೇ ರೀತಿಯ ಕಟ್ಟುನಿಟ್ಟಿನ ಕಾನೂನು ಬರಬೇಕು ಎಂದರು. ಜನಸಂಖ್ಯೆಯ ನಿಯಂತ್ರಣದ ಜಾಗೃತಿ ಕುರಿತಂತೆ ಡಾ. ಸೌಮ್ಯ. ಕೆ. ವಿ ಉಪನ್ಯಾಸ ನೀಡಿದರು.
ಸಂಸ್ಥೆಯ ಅಧ್ಯಕ್ಷ ರವಿ ಶಾನಭಾಗ ಅಧ್ಯಕ್ಷತೆ ವಹಿಸಿದ್ದರು. ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಸುನಂದಾ ದಾಸ್, ಉಪಾಧ್ಯಕ್ಷೆ ಶ್ಯಾಮಿಲಿ ಪಾಟಣಕರ್, ತಾಲೂಕು ಆರೋಗ್ಯಾಧಿಕಾರಿ ಡಾ. ನರೇಂದ್ರ ಪವಾರ, ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಟಿ.ಭಟ್ಟ, ಪ್ರವೀಣ ಇನಾಮದಾರ್ ಭಾಗವಹಿಸಿದ್ದರು.