Slide
Slide
Slide
previous arrow
next arrow

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯವಿಪತ್ತು ನಿರ್ವಹಣಾ ಘಟಕ ಬಹು ಉಪಯುಕ್ತ:ಸಂತೋಷ ಭಂಡಾರಿ

300x250 AD

ಸಿದ್ದಾಪುರ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರತಿಯೊಂದು ಕಾರ್ಯಕ್ರಮವೂ ಜನೋಪಯೋಗಿ ಆಗಿದೆ. ಅದರಲ್ಲೂ ವಿಪತ್ತು ನಿರ್ವಹಣಾ ಘಟಕವನ್ನು ಆರಂಭಿಸುವ ಮೂಲಕ ಜನತೆಗೆ ಮತ್ತಷ್ಟು ಉಪಯುಕ್ತವಾಗುವಂತೆ ಮಾಡಿದೆ. ಈ ವಿಪತ್ತು ನಿರ್ವಹಣಾ ಘಟಕದಿಂದ ಮುಂದೆ ಆಗಬಹುದಾದದ ಅವಘಡಗಳನ್ನು ತಡೆಯಬಹುದಾಗಿದೆ ಎಂದು ತಹಸೀಲ್ದಾರ ಸಂತೋಷ ಭಂಡಾರಿ ಹೇಳಿದರು.


ಪಟ್ಟಣದ ಶಂಕರಮಠಧ ಸಭಾಂಗಣದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಸಿದ್ದಾಪುರ, ಜನಜಾಗೃತಿ ಪ್ರಾದೇಶಿಕ ವಿಭಾಗ -ಬೆಳ್ತಂಗಡಿ ಹಾಗೂ ಅಗ್ನಿಶಾಮಕ ಘಟಕ ಸಿದ್ದಾಪುರ ಇವರ ಸಹಯೋಗದಲ್ಲಿ ‘ಶೌರ್ಯ’ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ಘಟಕದ ಸಂಯೋಜಕರು ಮತ್ತು ಸ್ವಯಂ ಸೇವಕರಿಗೆ ಆಯೋಜಿಸಿದ್ದ ತರಬೇತಿಯನ್ನು ಬುಧವಾರ ಉದ್ಘಾಟಿಸಿ ಅವರು ಮಾತನಾಡಿದರು.
ವಿಪತ್ತುಗಳು ಯಾವ ಸಂದರ್ಭದಲ್ಲಿ ಹೇಗೆ ಬರುತ್ತದೆ ಎಂದು ಹೇಳುವುದು ಕಷ್ಟ. ವಿಪತ್ತು ಆಗದಂತೆ ಮುನ್ನೆಚ್ಚರಿಕೆ ವಹಿಸುವುದು ಅವಶ್ಯ. ಕೇಂದ್ರ ಹಾಗೂ ರಾಜ್ಯ ಸರ್ಕಾರ ವಿಪತ್ತುಗಳನ್ನು ತಡೆಯುವುದಕ್ಕಾಗಿ ಹಲವು ಕಾರ್ಯಕ್ರಮಗಳನ್ನು ಹಾಕಿಕೊಂಡು ಅಧಿಕಾರಿಗಳಿಗೆ ಮಾಹಿತಿ ನೀಡಿದೆ. ಅದರಂತೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯೂ ವಿಪತ್ತು ನಿರ್ವಹಣಾ ಘಟಕವನ್ನ ಆರಂಭಿಸಿ ಸ್ವಯಂ ಸೇವಕರಿಗೆ ತರಬೇತಿ ನೀಡುತ್ತಿರುವುದು ಶ್ಲಾಘನೀಯ ಎಂದು ಹೇಳಿದರು.


ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷ ಸುಭಾಸ ನಾಯ್ಕ ಕಾನಸೂರು ಮಾತನಾಡಿ ವಿಪತ್ತು ನಿರ್ವಹಣಾ ಘಟಕದ ಸ್ವಯಂ ಸೇವಕರು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಬೇಕು. ಯಾವುದೇ ಕೆಟ್ಟ ಹವ್ಯಾಸವನ್ನು ರೂಢಿಸಿಕೊಂಡಿರಬಾರದು. ತಮ್ಮ ಜೀವ ರಕ್ಷಣೆಯೊಂದಿಗೆ ಬೇರೆಯವರ ಜೀವನವನ್ನು ರಕ್ಷಣೆ ಮಾಡುವ ಜವಾಬ್ದಾರಿ ನಿಮ್ಮದಾಗಿದೆ ಎಂದು ಹೇಳಿದರು.

300x250 AD


ತಾಲೂಕು ಆಡಳಿತ ವೈದ್ಯಾಧಿಕಾರಿ ಡಾ.ಲಕ್ಷ್ಮಿಕಾಂತ ನಾಯ್ಕ, ಪಿಎಸ್‌ಐ ಮಹಾಂತಪ್ಪ ಕುಂಬಾರ, ತಾಲೂಕು ಅಗ್ನಿಶಾಮಕ ಅಧಿಕಾರಿ ಗುರುನಾಥ ನಾಯ್ಕ, ಹೆಸ್ಕಾಂ ಇಂಜಿನಿಯರ್ ದಿಲೀಪ್ ಕುಮಾರ, ಜಿಲ್ಲಾ ಜನಜಾಗೃತಿ ವೇದಿಕೆ ನಿರ್ದೇಶಕರಾದ ಉಪೇಂದ್ರ ಪೈ ಶಿರಸಿ, ರಮೇಶ ಹೆಗಡೆ ಹಾರ್ಸಿಮನೆ, ಸಂಪನ್ಮೂಲ ವ್ಯಕ್ತಿಗಳಾದ ಅಗ್ನಿಶಾಮಕದಳದ ವಾಸುದೇವ ಪಾಲೇಕರ್, ಪ್ರಸಾದ ನಾಯ್ಕ, ಧರ್ಮಸ್ಥಳ ಸಂಘದ ವಿಪತ್ತು ನಿರ್ವಹಣಾ ವಿಭಾಗದ ಯೋಜನಾಧಿಕಾರಿ ಜೈವಂತ್ ಪಟಗಾರ ಇತರರಿದ್ದರು.


ನಂತರ ಅಗ್ನಿಶಾಮಕ ದಳದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕೆಲವು ಪ್ರಾತ್ಯಕ್ಷಿಕೆಯ ಮೂಲಕ ತರಬೇತಿ ನೀಡಿದರು.
ಜನಜಾಗೃತಿ ವೇದಿಕೆಯ ಜಿಲ್ಲಾ ನಿರ್ದೇಶಕ ಬಾಬು ನಾಯ್ಕ ಪ್ರಾಸ್ತಾವಿಕ ಮಾತನಾಡಿದರು. ತಾಲೂಕು ಯೋಜನಾಧಿಕಾರಿ ಪ್ರಭಾಕರ ನಾಯ್ಕ, ಸುಬ್ರಹ್ಮಣ್ಯ ಕಾರ್ಯಕ್ರಮ ನಿರ್ವಹಿಸಿದರು.

Share This
300x250 AD
300x250 AD
300x250 AD
Back to top