• Slide
    Slide
    Slide
    previous arrow
    next arrow
  • ಪ್ರವೀಣ್ ಹತ್ಯೆ ಎಲ್ಲರೂ ತಲೆತಗ್ಗಿಸುವ ವಿಚಾರ:ರಾಘವೇಶ್ವರ ಶ್ರೀ

    300x250 AD

    ಗೋಕರ್ಣ: ದಕ್ಷಿಣ ಕನ್ನಡ ಜಿಲ್ಲೆ ಬೆಳ್ಳಾರೆಯ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಅವರ ಹತ್ಯೆಯನ್ನ ತೀವ್ರವಾಗಿ ಖಂಡಿಸಿರುವ ಶ್ರೀರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ, ಇದು ಎಲ್ಲರೂ ತಲೆತಗ್ಗಿಸುವ ವಿಚಾರ ಎಂದಿದ್ದಾರೆ.

    ಯುವ ನಾಯಕನನ್ನು ಮಾರಕಾಸ್ತ್ರಗಳಿಂದ ಕಡಿದು ಬರ್ಬರವಾಗಿ ಹತ್ಯೆ ಮಾಡಿರುವ ಹೇಯ ಕೃತ್ಯ ಎಲ್ಲರೂ ತಲೆ ತಗ್ಗಿಸುವ ವಿಚಾರ. ಸರ್ಕಾರ ತಕ್ಷಣ ಆರೋಪಿಗಳನ್ನು ಬಂಧಿಸಿ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.

    ಪ್ರವೀಣ್ ಸಾವು ಸಮಾಜಕ್ಕೆ ತುಂಬಲಾರದ ನಷ್ಟ. ಈ ಘಟನೆಯ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರಿಗೆ ಸೂಕ್ತ ಶಿಕ್ಷೆ ವಿಧಿಸಬೇಕು. ಮುಂದೆ ಇಂಥ ಘಟನೆಗಳು ನಡೆಯದಂತೆ ಸೂಕ್ತ ಮುನ್ನೆಚ್ಚರಿಕೆ ವಹಿಸಬೇಕು. ದಕ್ಷಿಣ ಕನ್ನಡ ಜಿಲ್ಲೆಯ ಜನ ಶಾಂತಿಪ್ರಿಯರು. ಜನ ಆವೇಶಕ್ಕೆ ಒಳಗಾಗದೇ ಶಾಂತಿ ಸುವ್ಯವಸ್ಥೆ ಕಾಪಾಡಲು ಸಹಕರಿಸಬೇಕು. ನ್ಯಾಯಕ್ಕಾಗಿ ನಡೆಸುವ ಹೋರಾಟ ಶಾಂತಿಯುತವಾಗಿರಲಿ ಎಂದು ಸ್ವಾಮೀಜಿ ಕಿವಿಮಾತು ಹೇಳಿದ್ದಾರೆ.

    300x250 AD

    ಪ್ರವೀಣ್ ಸದಾ ಶ್ರೀಮಠದ ಜತೆ ಉತ್ತಮ ಸಂಪರ್ಕ ಹೊಂದಿದ್ದು, ಆಗಾಗ್ಗೆ ಶ್ರೀಮಠಕ್ಕೆ ಭೇಟಿ ನೀಡಿ ಸಾಮಾಜಿಕ ವಿಷಯಗಳ ಬಗ್ಗೆ ಮಾರ್ಗದರ್ಶನ ಪಡೆಯುತ್ತಿದ್ದ. ಆತನ ಕುಟುಂಬದ ಜತೆ ಶ್ರೀಮಠ ಸದಾ ಇರುತ್ತದೆ ಎಂದು ಅಭಯ ನೀಡಿದ್ದಾರೆ.

    Share This
    300x250 AD
    300x250 AD
    300x250 AD
    Leaderboard Ad
    Back to top