ಮುಂಡಗೋಡ: ರಾಜ್ಯದಲ್ಲಿ ಹಿಂದು ಯುವಕರ ಮೇಲೆ ದಾಳಿಗಳು ಹೆಚ್ಚಾಗುತ್ತಿದ್ದು, ಅದನ್ನು ಖಂಡಿಸಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ವೀಣಾ ಓಶಿಮಠ ಅವರು ರಾಜೀನಾಮೆ ನೀಡಿರುವುದಾಗಿ ತಿಳಿಸಿದ್ದಾರೆ.
ರಾಜ್ಯದಲ್ಲಿ ಬಿಜೆಪಿಯ ಕಾರ್ಯಕರ್ತ ಪ್ರವೀಣ ನೆಟ್ಟಾರು ಅವರ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿ ಹತ್ಯೆಗೈದಿರುವುದನ್ನು ಖಂಡಿಸಿರುವ ವೀಣಾ, ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದಿದ್ದಾರೆ. ಇದನ್ನು ಜಿಲ್ಲಾ ಅಧ್ಯಕ್ಷರು ಸ್ವೀಕರಿಸಿ, ಜಿಲ್ಲಾ ಮಹಿಳಾ ಮೋರ್ಚಾ ಉಪಾಧ್ಯಕ್ಷ ಸ್ಥಾನದ ರಾಜೀನಾಮೆಯನ್ನು ಅಂಗೀಕರಿಸುವುದಾಗಿ ತಿಳಿಸಿದ್ದಾರೆ.
ಕೆಂದ್ರದಲ್ಲಿ ಹಾಗೂ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದ್ದು, ಇಂತಹ ದುಷ್ಕರ್ಮಿಗಳ ಮೇಲೆ ಕಠಿಣವಾಗಿ ಕ್ರಮಕೈಗೊಂಡು ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿದ್ದಾರೆ.