• Slide
    Slide
    Slide
    previous arrow
    next arrow
  • ಮತಾಂಧ ಸಂಘಟನೆಗಳ ನಿಷೇಧಕ್ಕೆ ಆಗ್ರಹ: ಮನವಿ ಸಲ್ಲಿಕೆ

    300x250 AD

    ಯಲ್ಲಾಪುರ: ದೇಶದ ಏಕತೆ ಮತ್ತು ಸಮಗ್ರತೆಗೆ ಮಾರಕವಾಗಿರುವ ಮತಾಂಧ ಸಂಘಟನೆಗಳನ್ನು ನಿಷೇಧಿಸಬೇಕೆಂದು ಆಗ್ರಹಿಸಿ ಪಟ್ಟಣದ ತಹಸೀಲ್ದಾರ್ ಕಚೇರಿಯಲ್ಲಿ ಸಂಘ ಪರಿವಾರದ ಕಾರ್ಯಕರ್ತರು ತಹಸೀಲ್ದಾರ್ ಶ್ರೀಕೃಷ್ಣ ಕಾಮ್ಕರ್ ಅವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

    ಸಂಘ ಪರಿವಾರದ ಕಾರ್ಯಕರ್ತರ ಹತ್ಯೆ ನಡೆಯುತ್ತಿದ್ದು, ಇದರ ಹಿಂದಿನ ದೇಶದ್ರೋಹಿಗಳ ಜಾಲವನ್ನು ಭೇಧಿಸಬೇಕು. 2047 ರ ಒಳಗೆ ಭಾರತವನ್ನು ಇಸ್ಲಾಂ ರಾಷ್ಟ್ರವನ್ನಾಗಿಸುವ ಹುನ್ನಾರ ನಡೆದಿದ್ದು, ಅಂತಹ ಭಯೋತ್ಪಾದಕ ಚಟುವಟಿಕೆಗಳ ವಿರುದ್ಧ ಸೂಕ್ತ ಕ್ರಮ ಆಗಬೇಕು. ಎಸ್.ಎಫ್.ಐ, ಪಿ.ಎಫ್.ಐ, ಎಸ್.ಡಿ.ಪಿ.ಐ ಮುಂತಾದ ದೇಶದ್ರೋಹಿ ಸಂಘಟನೆಗಳನ್ನು ನಿಷೇಧಿಸಬೇಕೆಂದು ಆಗ್ರಹಿಸಿದರು.

    300x250 AD

        ಸಂಘ ಪರಿವಾರದ ಕಾರ್ಯಕರ್ತರಾದ ರಾಮು ನಾಯ್ಕ, ಬಾಬು ಬಾಂದೇಕರ್, ವಿನೋದ ತಳೆಕರ್, ಗಜಾನನ ನಾಯ್ಕ ತಳ್ಳಿಕೇರಿ, ಎಲ್.ಆರ್.ಭಟ್ಟ ಇತರರಿದ್ದರು.

    Share This
    300x250 AD
    300x250 AD
    300x250 AD
    Leaderboard Ad
    Back to top