• Slide
    Slide
    Slide
    previous arrow
    next arrow
  • ಸಿದ್ದರಾಮಯ್ಯ ಜನ್ಮದಿನದ ಅಮೃತ ಮಹೋತ್ಸವ:ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಲು ಕರೆ

    300x250 AD

    ಶಿರಸಿ: ಬನವಾಸಿ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಕೆಪಿಸಿಸಿ ಸದಸ್ಯರು ಹಾಗೂ ಯಲ್ಲಾಪುರ ವಿಧಾನ ಸಭಾ ಕ್ಷೇತ್ರದ ಉಸ್ತುವಾರಿಯಾದ ಸನ್ಮಾನ್ಯ ಪ್ರಶಾಂತ ದೇಶಪಾಂಡೆಯವರು ಸಭೆಯಲ್ಲಿ ಭಾಗವಹಿಸಿ, ಅಗಸ್ಟ್ 03 ದಾವಣಗೆರೆಯಲ್ಲಿ  ನಡೆಯುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರವರ 75 ನೇ ಜನ್ಮದಿನದ ಅಮೃತ ಮಹೋತ್ಸವ ಕಾರ್ಯಕ್ರಮದ ಬಗ್ಗೆ ಮಾತನಾಡಿದರು.

    ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿ 5 ವರ್ಷದಲ್ಲಿ ಕಳಂಕ ರಹಿತವಾಗಿ ಆಡಳಿತ ನಡೆಸಿ ಜನಮನ್ನಣೆ ಗಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ದಾವಣಗೆರೆಯಲ್ಲಿ ನಡೆಯುವ ಅಮೃತ ಮಹೋತ್ಸವದ ಕಾರ್ಯಕ್ರಮಕ್ಕೆ ಬನವಾಸಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಸ್ವಯಂ ಪ್ರೇರಣೆಯಿಂದ ಭಾಗವಹಿಸಿ ಅಂದಿನ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಪಕ್ಷದ ಮುಖಂಡರುಗಳಿಗೆ ಹಾಗೂ ಕಾರ್ಯಕರ್ತರಿಗೆ ಕರೆ ನೀಡಿದರು 

    300x250 AD

    ಈ ಸಭೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸಿ.ಎಫ್.ನಾಯ್ಕ, ಬನವಾಸಿ ಬ್ಲಾಕ್ ಕಾಂಗ್ರೆಸ್ ಪಕ್ಷದ ಬಿ ಆರ್ ಓ ರಾಘವೇಂದ್ರ ನರ್ತಿ, ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ಬಸವರಾಜ ದೊಡ್ಮನಿ, ಕಾಂಗ್ರೆಸ್ ಪಕ್ಷದ ವಕ್ತಾರ ದೀಪಕ್ ದೊಡ್ಡುರು, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಶ್ರೀಲತಾ ಶಿವಾಜಿ ಕಾಳೇರಮನಿ, ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಸಿದ್ಧನಗೌಡ ಬೆಣಗಿ, ಹಿಂದುಳಿದ ವರ್ಗಗಳ ಅಧ್ಯಕ್ಷರಾದ ಈರಪ್ಪ ನಾಯ್ಕ,ಯುತ್ ಕಾಂಗ್ರೆಸ್ ಅಧ್ಯಕ್ಷ ಆಶೀಪ್, ಘಟಕಾಧ್ಯಕ್ಷ ದೀಪಕ್ ಬಂಗ್ಲೆ, ಪುಟ್ಟಪ್ಪ ನಾಯ್ಕ, ಸಿ.ಬಿ.ಗೌಡ, ರವಿ ನಾಯ್ಕ, ಗಣಪತಿ ಗೌಡ, ಸಿದ್ದನ ಗೌಡ ಮೂಡುರು, ರಾಘವೇಂದ್ರ ನಾಯ್ಕ, ಮುಖಂಡರಾದ ಕಿರಣ್ ಭಾಶಿ,ಎಸ್.ಜಿ.ಭಟ್,ಭದ್ರ ಗೌಡ,ಬಿ.ಶಿವಾಜಿ ಬನವಾಸಿ,ವಿ.ಎಸ್.ನಾಯ್ಕ ನರುರು, ಅಬ್ದುಲ್ ಕರಿಂ, ಅಲ್ತಾಫ್ ಚೌದರಿ,ಆನಂದ್ ಮದುರವಳ್ಳಿ ಮುಂತಾದವರು ಉಪಸ್ಥಿತರಿದ್ದರು.

    Share This
    300x250 AD
    300x250 AD
    300x250 AD
    Leaderboard Ad
    Back to top