• Slide
    Slide
    Slide
    previous arrow
    next arrow
  • ಎಸ್‌ಕೆಪಿ ಪ್ರೌಢಶಾಲೆಯಲ್ಲಿ ಮಕ್ಕಳ ಸಂತೆ ಕಾರ್ಯಕ್ರಮ

    300x250 AD

    ಕುಮಟಾ: ಮಕ್ಕಳಿಗೆ ಪಾಠದ ಜೊತೆ ವಿವಿಧ ಚಟುವಟಿಕೆಗಳನ್ನು ಬೆಳೆಸಿಕೊಳ್ಳಬೇಕು ಎನ್ನುವ ಉದ್ದೇಶದಿಂದ ಮಕ್ಕಳ ಸಂತೆ ಕಾರ್ಯಕ್ರಮವು ಕತಗಾಲದ ಎಸ್‌ಕೆಪಿ ಪ್ರೌಢಶಾಲೆಯಲ್ಲಿ ನಡೆಯಿತು.

    ಕಾರ್ಯಕ್ರಮ ಉದ್ಘಾಟಿಸಿದ ಉಪ್ಪಿನ ಪಟ್ಟಣದ ಸಹಕಾರಿ ಸಂಘದ ಅಧ್ಯಕ್ಷ ವಿ.ಪಿ.ಹೆಗಡೆ, ತರಗತಿಯ ಪಾಠ ಪ್ರವಚನಗಳ ಜೊತೆಯಲ್ಲಿ ವ್ಯವಹಾರಿಕ ಜ್ಞಾನವು ಬೆಳೆಸಿಕೊಂಡರೆ ವಿದ್ಯಾರ್ಥಿಗಳ ಸರ್ವತೋಮುಖ ಕಲಿಕೆ ಸಾಧ್ಯ ಎಂದು ಹೇಳಿದರು.

    ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ವಿವೇಕ ಜಾಲಿಸತ್ಗಿ ಮಾತನಾಡಿ, ಮಕ್ಕಳ ವಿಕಾಸಕ್ಕೆ ಪೂರಕವಾದ ಕಾರ್ಯಕ್ರಮಗಳ ಆಯೋಜನೆಯ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು. ಇಂತಹ ಕಾರ್ಯಕ್ರಮಗಳ ಸದ್ಬಳಕೆಯನ್ನು ಮಕ್ಕಳು ಪಡೆದುಕೊಳ್ಳಬೇಕೆಂದು ಕರೆ ನೀಡಿದರು. ಶಾಲೆಯ ಮುಖ್ಯಾಧ್ಯಾಪಕ ಎಸ್.ಎಸ್.ಕೊರವರ ಸ್ವಾಗತಿಸಿದರು.

    300x250 AD

    ಈ ಸಂದರ್ಭದಲ್ಲಿ ಶಾಲೆಯ ಸಿಬ್ಬಂದಿ, ಪಾಲಕರು, ಊರ ನಾಗರಿಕರು ಪಾಲ್ಗೊಂಡಿದ್ದರು. ಮಧ್ಯಾಹ್ನ ಶಿಕ್ಷಕಿಯರಾದ ಮಂಗಲಾ ಬಿ.ಶೆಟ್ಟಿಯವರ ಮಾರ್ಗದರ್ಶನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ತಿಂಗಳ ಬೆಳಕು ಸಂಪನ್ನಗೊಂಡಿತು.

    Share This
    300x250 AD
    300x250 AD
    300x250 AD
    Leaderboard Ad
    Back to top