• Slide
    Slide
    Slide
    previous arrow
    next arrow
  • ಕೇಂದ್ರ ಬುಡಕಟ್ಟು ಮಂತ್ರಾಲಯ ಆದೇಶ ನಿರ್ಲಕ್ಷ್ಯ:ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಲು ತೀರ್ಮಾನ

    300x250 AD

    ಭಟ್ಕಳ: ಅರಣ್ಯ ಭೂಮಿ ಹಕ್ಕು ಮಂಜೂರಿ ಪ್ರಕ್ರಿಯೆ ನಾಮನಿರ್ದೇಶನ ಸದಸ್ಯರ ಅನುಪಸ್ಥಿತಿ ಮತ್ತು ವೈಯಕ್ತಿಕ ಮೂರು ತಲೆಮಾರಿನ ದಾಖಲೆಗಳ ಅಗ್ರಹಿಸುವಿಕೆಗೆ ಜಿಲ್ಲಾ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯು ತೀವ್ರ ಆಕ್ಷೇಪ ವ್ಯಕ್ತಪಡಿಸಿ, ಕರ್ನಾಟಕ ಉಚ್ಛ ನ್ಯಾಯಾಲಯದಲ್ಲಿ  ಸಾರ್ವಜನಿಕ ಹಿತಾಸಕ್ತಿಯ ಅರ್ಜಿ ದಾಖಲಿಸಲು ನಿರ್ಧರಿಸಲಾಗಿದೆ ಎಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ತಿಳಿಸಿದ್ದಾರೆ.

     ಅವರು ಭಟ್ಕಳ ತಾಲೂಕಿನ ಅರಣ್ಯ ಅತಿಕ್ರಮಣದಾರರ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಾ ಮೇಲಿನಂತೆ ಸಂಘದ ನಿರ್ಧಾರವನ್ನು ಪ್ರಕಟಿಸಿದರು.

    ಪಾರಂಪರಿಕ ಅರಣ್ಯವಾಸಿಗಳ ಅರ್ಜಿ ಮಂಜೂರಿಗೆ ಸಂಬಂಧಿಸಿ ನಿರ್ದಿಷ್ಟವಾದ ದಾಖಲೆಗಳಿಗೆ ಒತ್ತಾಯಿಸತಕ್ಕದ್ದಲ್ಲ ಎಂಬ ಅಂಶ ಕಾನೂನಿನಲ್ಲಿ ಉಲ್ಲೇಖವಿದ್ದಾಗಲೂ ದಾಖಲೆಗಳಿಗೆ ಒತ್ತಾಯಿಸುವದು ಕಾನೂನು ಬಾಹಿರ ಕ್ರಮ ಎಂದು ಅವರು ಹೇಳುತ್ತಾ, ಅರಣ್ಯವಾಸಿಗಳ ಸಾಗುವಳಿ ಕ್ಷೇತ್ರದ ಪರಿಸರವು 3 ತಲೆಮಾರಿನ ಜನವಸತಿ ಪ್ರದೇಶವೆಂದು ಪುರಾವೆ ಮಾಡಿದರೆ ಸಾಕು ಎಂಬ ಕೇಂದ್ರ ಬುಡಕಟ್ಟು ಮಂತ್ರಾಲಯ ನೀಡಿದ ಆದೇಶವನ್ನು ನಿರ್ಲಕ್ಷಿಸುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದಾಗಲೂ ಸೂಕ್ತ ಕ್ರಮ ಜರುಗಿಸದೇ ಇರುವುದರಿಂದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಲು ತೀರ್ಮಾನಿಸಲಾಗಿದೆ ಎಂದು ಅವರು ಹೇಳಿದರು.

    300x250 AD

    ಸದಸ್ಯರು ಇಲ್ಲದ ಸಮಿತಿಯಿಂದ ವಿಚಾರಣೆ :  ಕಾನೂನಿನ ಸಮಿತಿಯಲ್ಲಿ ಮೂರು ನಾಮನಿರ್ದೇಶನ ಸದಸ್ಯರನ್ನ ಒಳಗೊಂಡ ಒಟ್ಟು ಆರು ಸದಸ್ಯರು ಇರಬೇಕೆಂಬ ಅಂಶವನ್ನ ಪರಿಗಣನೆಗೆ ತೆಗೆದುಕೊಳ್ಳದೇ, ಕೇವಲ ಅಧಿಕಾರ ವರ್ಗದವರ ಸದಸ್ಯರ ಉಪಸ್ಥಿತಿಯಲ್ಲಿ, ಸಮಿತಿಯ ಹೆಸರಿನಲ್ಲಿ ಅತಿಕ್ರಮಣದಾರರಿಗೆ ನೋಟಿಸ್ ನೀಡಿ ಅರ್ಜಿಗಳನ್ನ ಪುನರ್ ಪರಿಶೀಲಿಸುತ್ತಿರುವುದಕ್ಕೆ ರವೀಂದ್ರ ನಾಯ್ಕ ಆಕ್ಷೇಪ ವ್ಯಕ್ತಪಡಿಸಿದರು.

      ಸಭೆಯಲ್ಲಿ ಪಾಂಡುರಂಗ ನಾಯ್ಕ ಬೆಳಕೆ, ದೇವರಾಜ ಗೊಂಡ ಭಟ್ಕಳ, ಮಂಜು ಮರಾಠಿ ಕುಮಟ, ಚಂದ್ರು ನಾಯ್ಕ ಗೊರಟೆ, ಚಾಮುಂಡಿ ಶಬ್ಬೀರ್ ಭಟ್ಕಳ, ಎಸ್ ಕೆ ಮನ್ಸೂದ್, ಮೋಹಿದ್ದೀನ್ ಭಟ್ಕಳ, ಶಂಕರ ನಾಯ್ಕ ಬೆಳಕೆ, ಮಂಜಪ್ಪ ಗಿಡ್ಡ ನಾಯ್ಕ, ವೆಂಕಟೇಶ ವೈಧ್ಯ ಬೆಳಕೆ, ಫರಿದಾಬಾನು ಜಾಲಿ ಮುಂತಾದವರು ಉಪಸ್ಥಿತರಿದ್ದರು.

    Share This
    300x250 AD
    300x250 AD
    300x250 AD
    Leaderboard Ad
    Back to top